ತುಮಕೂರು: ಎರಡು ಕೋಟಿ 19 ಲಕ್ಷ ಗ್ರಾಹಕರಿಗೆ 13, 910 ಕೋಟಿ ರೂಪಾಯಿ ಮೌಲ್ಯದ ವಿದ್ಯುತ್ ಉಚಿತವಾಗಿ ನೀಡಲಾಗುತ್ತಿದೆ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 1.28 ಕೋಟಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಅಡಿ ಫಲಾನುಭವಿಗಳಾಗಿದ್ದು, ಈ ಯೋಜನೆಗೆ ವರ್ಷಕ್ಕೆ 33,000 ಕೋಟಿ ಹಣ ವಿನಿಯೋಗಿಸಲಾಗುತ್ತಿದೆ ಎಂದರು.
ಈ ಗೃಹಲಕ್ಷ್ಮಿ ಯೋಜನೆಯನ್ನೂ ಇತ್ತೀಚಿಗೆ ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರು ಅಧಿಕೃತವಾಗಿ ಚಾಲನೆ ನೀಡಿದರು ಏಕಕಾಲದಲ್ಲಿ 1.28 ಕೋಟಿ ಮಹಿಳೆಯರ ಖಾತೆಗಳಿಗೆ ನೇರವಾಗಿ ಹಣ ವರ್ಗಾವಣೆ ಆಗಿದೆ ಎಂದು ಹೇಳಿದರು.


