ಹಾವೇರಿ: ರಾಜ್ಯದ ಮೂರು ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ಇಂದು ತೆರೆಬೀಳಲಿದೆ. ರಾಜಕೀಯ ನಾಯಕರು ಮತದಾರರನ್ನು ಓಲೈಸಲು ಕೊನೇ ಕ್ಷಣದ ಪ್ರಯತ್ನ ನಡೆಸಿದ್ದಾರೆ.
ಶಿಗ್ಗಾಂವಿಯಲ್ಲಿ ಮತದಾರರಿಗೆ ಹಂಚಲು ಸಂಗ್ರಹಿಸಿಟ್ಟಿದ್ದ 2.68 ಲಕ್ಷ ರೂ. ಹಣವನ್ನು ಎಫ್ ಎಸ್ ಟಿ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸವಣೂರಿನ ಸುಭಾಷ್ ಗಡ್ಡೆಪ್ಪನವರ್ ಎಂಬುವವರ ಮನೆಯಲ್ಲಿ ಹಣ ಸಂಗ್ರಹಿಸಿ ಇಡಲಾಗಿತ್ತು. ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಈ ಹಣ ಸಂಗ್ರಹಿಸಲಾಗಿದೆ ಎಂದು ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರು ಆರೋಪಿಸಿದ್ದರು.
ಖಚಿತ ಮಾಹಿತಿ ಮೇರೆಗೆ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಮನೆಯಲ್ಲಿದ್ದ ಒಟ್ಟು 2.68 ಲಕ್ಷ ರೂಪಾಯಿ ಹಣವನ್ನು ಜಪ್ತಿ ಮಾಡಿದ್ದಾರೆ. ಆರೋಪಿ ಸುಭಾಷ್ ಗಡ್ಡೆಪ್ಪನವರ್ ವಿರುದ್ಧ ಎನ್ ಸಿಆರ್ ದಾಖಲಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q