ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 17ರಿಂದ 2 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.


