ಛತ್ತೀಸ್ ಗಢ: ಛತ್ತೀಸ್ ಗಢದ ಬಿಜಾಪುರ ಹಾಗೂ ಕಾಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ 22 ನಕ್ಸಲರನ್ನು ಹತ್ಯೆ ಮಾಡಲಾಗಿದೆ.
ಬೆಳಗ್ಗೆ 7 ಗಂಟೆಯಿಂದ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ನಿರಂತರ ಗುಂಡಿನ ಚಕಮಕಿ ನಡೆಯುತ್ತಿದೆ. ಎನ್ ಕೌಂಟರ್ ಸ್ಥಳದಿಂದ 22 ನಕ್ಸಲರ ಮೃತದೇಹಗಳು ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬಿಜಾಪುರ ಡಿಆರ್‌ಜಿಯ ಒಬ್ಬ ಸೈನಿಕ ಕೂಡ ಈ ಎನ್ ಕೌಂಟ ರ್‌ನಲ್ಲಿ ಹುತಾತ್ಮರಾಗಿದ್ದಾರೆ. ಎನ್‌ಕೌಂಟರ್ ಸ್ಥಳದಿಂದ ಎಕೆ 47, ಎಸ್‌ಎಲ್‌ಆರ್‌ನಂತಹ ದೊಡ್ಡ ಸ್ವಯಂಚಾಲಿತ ರೈಫಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4