ತುಮಕೂರು: ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇತ್ತೀಚೆಗೆ 2 ಪ್ರತ್ಯೇಕ ಕಾಣೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.
ಪ್ರಕರಣ-1 : ಸುಮಾರು 20 ವರ್ಷದ ಕೃತಿಕ ಪಿ. ಎಂಬ ಯುವತಿಯು ಅಕ್ಟೋಬರ್ 3 ರಿಂದ ಕಾಣೆಯಾಗಿದ್ದಾಳೆ ಎಂದು ಈಕೆಯ ತಾಯಿ ನಾಗವೇಣಿ ಠಾಣೆಗೆ ದೂರು ಸಲ್ಲಿಸಿದ್ದಾರೆ. ಕಾಣೆಯಾದ ಯುವತಿಯು 5.2 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಮಾತನಾಡುತ್ತಾಳೆ. ಕಾಣೆಯಾದ ಸಂದರ್ಭದಲ್ಲಿ ಸಿಮೆಂಟ್ ಬಣ್ಣದ ಟೀ–ಷರ್ಟ್, ಕಪ್ಪು ಬಣ್ಣದ ಸ್ಕರ್ಟ್ ಧರಿಸಿದ್ದಳು.
ಪ್ರಕರಣ-2 : ಸುಮಾರು 38 ವರ್ಷದ ಯೋಗೀಶ್ ಬಿನ್ ನಾಗಪ್ಪ ಎಂಬ ವ್ಯಕ್ತಿಯು ಏಪ್ರಿಲ್ 8 ರಿಂದ ಕಾಣೆಯಾಗಿದ್ದಾನೆ ಎಂದು ಈತನ ಪತ್ನಿ ಶ್ವೇತ ಠಾಣೆಗೆ ದೂರು ನೀಡಿದ್ದಾರೆ. ಕಾಣೆಯಾದ ವ್ಯಕ್ತಿಯು 5.5 ಅಡಿ ಎತ್ತರ, ಕೋಲು ಮುಖ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ ಹೊಂದಿದ್ದು, ಕನ್ನಡ ಮಾತನಾಡುತ್ತಾನೆ. ಈತನು ಕಾಣೆಯಾದ ಸಂದರ್ಭದಲ್ಲಿ ಮೆಂತ್ಯೆ ಬಣ್ಣದ ತುಂಬು ತೋಳಿನ ಅಂಗಿ ಮತ್ತು ಕಪ್ಪು ನೈಟ್ ಪ್ಯಾಂಟ್ ಧರಿಸಿದ್ದನು.
ಕಾಣೆಯಾದವರ ಬಗ್ಗೆ ಸುಳಿವು ಸಿಕ್ಕವರು ಕೂಡಲೇ ದೂ.ವಾ.ಸಂ. 0816-22272451, 08131-22229/222210, ಮೊ.ಸಂ.9480802959ನ್ನು ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296