ತುಮಕೂರು: ಜಿಲ್ಲೆಯಲ್ಲಿ ಸೋಮವಾರ ರಾತ್ರಿ ಜೋರು ಮಳೆಯಾಗಿದ್ದು, ಕೆರೆ, ಕಟ್ಟೆಗಳು ಭರ್ತಿಯಾಗಿವೆ. ಕೊರಟಗೆರೆ, ಮಧುಗಿರಿ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಸುಮಾರು 20 ವರ್ಷಗಳ ನಂತರ ಜಯಮಂಗಲಿ ನದಿ ತುಂಬಿ ಹರಿಯುತ್ತಿದೆ.
ನದಿ ಹರಿಯುವುದನ್ನು ನೋಡಲು ಜನರು ಸಾಗರೋಪಾದಿಯಲ್ಲಿ ಜಮಾಯಿಸುತ್ತಿದ್ದಾರೆ. ಮೊಬೈಲ್ ಗಳಲ್ಲಿ ಫೋಟೊ ತೆಗೆದುಕೊಂಡು, ವಿಡಿಯೊ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಕಳೆದ ಕೆಲ ವರ್ಷಗಳಿಂದ ಒಣಗಿ ಹೋಗಿದ್ದ ಕೆರೆಗಳಿಗೂ ಜೀವ ಕಳೆ ಬಂದಿದೆ. ಬಹುತೇಕ ಕೆರೆಗಳು ಭರ್ತಿಯಾಗಿದ್ದು, ಕೋಡಿ ಹರಿಯುತ್ತಿದೆ. ಕೆರೆ ಕೋಡಿಯಲ್ಲಿ ನೀರು ಹರಿಯುವುದನ್ನು ನೋಡಲು ಜನರು ಬರುತ್ತಿದ್ದಾರೆ.
ಸಾಮಾನ್ಯವಾಗಿ ಜಿಲ್ಲೆಯಲ್ಲಿ ಮುಂಗಾರು ಅಂತ್ಯದ ನಂತರ ಅಕ್ಟೋಬರ್ ತಿಂಗಳ ಕೊನೆವರೆಗೂ ಮಳೆಯಾಗುತ್ತದೆ. ಹೆಚ್ಚೆಂದರೆ ನವೆಂಬರ್ ತಿಂಗಳ ಆರಂಭದಲ್ಲಿ ಒಂದೆರಡು ಬಾರಿ ಸುರಿಯುತ್ತದೆ. ಆದರೆ ಈ ಸಲ ನವೆಂಬರ್ ಮಧ್ಯಭಾಗದಲ್ಲೂ ಮಳೆಯಾಗುತ್ತಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700