ತುಮಕೂರು: ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆ ಗರ್ಭಿಣಿಯಾಗಲು ಕಾರಣನಾದ ಅಪರಾಧಿಗೆ ಅಧಿಕ ಜಿಲ್ಲಾ ಸತ್ರ ನ್ಯಾಯಾಲಯ ಎಫ್ ಟಿಎಸ್ ಸಿ(POCSO) 20 ವರ್ಷಗಳ ಜೈಲು ಶಿಕ್ಷೆ ಮತ್ತು 1 ಲಕ್ಷ ರೂಪಾಯಿಗಳ ದಂಡ ವಿಧಿಸಿ ತೀರ್ಪು ನೀಡಿದೆ.
ಪಾವಗಡ ಪೊಲೀಸ್ ಠಾನೆ ಸರಹದ್ದಿನಲ್ಲಿ ಈ ಘಟನೆ ನಡೆದಿದ್ದು, ಮಹೇಶ್ ಬಾಬು(25) ಶಿಕ್ಷೆಗೊಳಪಟ್ಟ ಅಪರಾಧಿಯಾಗಿದ್ದಾನೆ. ಈತ 16 ವರ್ಷದ ಬಾಲಕಿಯನ್ನು ಪ್ರೀತಿಸು ಎಂದು ಪೀಡಿಸಿ, ಆಕೆ ನಿರಾಕರಿಸಿದಾಗ ಆಕೆಯನ್ನು ಕೊಂಡು ಹೋಗಿ ಹಲವಾರು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಇದರ ಪರಿಣಾಮ ಬಾಲಕಿ ಗರ್ಭಿಣಿಯಾಗಿದ್ದಳು.
ಈ ಪ್ರಕರಣ ಸಂಬಂಧ ಪೊಲೀಸ್ ಇನ್ಸ್ ಪೆಕ್ಟರ್ ಡಿ.ನಾಗರಾಜು ತನಿಖೆ ನಡೆಸಿ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಅಭಿಯೋಜನೆಯ ಪರ ವಿಚಾರಣೆ ಮಾಡಲಾದ ಸಾಕ್ಷಿಗಳಿಂದ ಆರೋಪಿಯ ವಿರುದ್ಧ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಅಪರಾಧಿಗೆ 20 ವರ್ಷಗಳ ಸಜೆ, 1 ಲಕ್ಷ ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ನೊಂದ ಬಾಲಕಿಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ತುಮಕೂರು ಇದರಿಂದ 5 ಲಕ್ಷ ರೂಪಾಯಿಗಳ ಪರಿಹಾರ ಹಾಗೂ ಅಪರಾಧಿಗೆ ವಿಧಿಸಿದ 1 ಲಕ್ಷ ರೂಪಾಯಿ ದಂಡದ ಮೊತ್ತದಲ್ಲಿ 95,000 ರೂಪಾಯಿಗಳು ಸೇರಿ ಒಟ್ಟು 5,95,000 ರೂಪಾಯಿ ಪರಿಹಾರ ನೀಡುವಂತೆ ಆದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಆಶಾ ಕೆ.ಎಸ್. ಅವರು ವಾದ ಮಂಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q