nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್

    January 28, 2023

    ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ

    January 28, 2023

    ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ

    January 28, 2023
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್
    • ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ
    • ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ
    • ಮಗುವನ್ನು ಅಪಹರಿಸಿ ಹಣದ ಡಿಮ್ಯಾಂಡ್:ಪೊಲೀಸರಿಂದ ಒಂದು ವರ್ಷದ ಮಗುವಿನ ರಕ್ಷಣೆ
    • ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು
    • 32 ವರ್ಷಗಳ ನಂತರ, ಕಾಶ್ಮೀರದಲ್ಲಿ ಥಿಯೇಟರ್ ಹೌಸ್‌ ಫುಲ್
    • ಜಪಾನ್‌ ನ ಆಕಾಶದಲ್ಲಿ ನೀಲಿ ಬೆಳಕಿನ ಸುರುಳಿ; ಹಾರುವ ತಟ್ಟೆಯಲ್ಲಿ ಏಲಿಯನ್‌ ಗಳು
    • ಮುಂದುವರೆದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅನಾಥ ಮಕ್ಕಳು… | ವಿವೇಕಾನಂದ ಹೆಚ್.ಕೆ. ಅವರ ಲೇಖನ
    ಲೇಖನ December 4, 2021

    ಅನಾಥ ಮಕ್ಕಳು… | ವಿವೇಕಾನಂದ ಹೆಚ್.ಕೆ. ಅವರ ಲೇಖನ

    By adminDecember 4, 2021No Comments3 Mins Read

    ಅಮೆರಿಕಾದಲ್ಲಿ ಕೆಲವು ವರ್ಷಗಳು ವಾಸವಾಗಿದ್ದು ಹಿಂತಿರುಗಿದ ಹಿರಿಯ ಪರಿಚಿತರೊಬ್ಬರು ಭೇಟಿಯಾಗಿದ್ದರು…..

    ಹೀಗೆ ಲೋಕಾಭಿರಾಮವಾಗಿ ಮಾತನಾಡುತ್ತಾ ಅನೇಕ ವಿಷಯಗಳನ್ನು ಚರ್ಚಿಸಿದೆವು.

    ಭಾರತದ ಸಂಸ್ಕೃತಿ ಸಂಪ್ರದಾಯಗಳ ಬಗ್ಗೆ ಅಪಾರ ಕಾಳಜಿ ಮತ್ತು ವಿದೇಶಿ ಸಂಸ್ಕೃತಿಯ ಬಗ್ಗೆ ಒಂದಷ್ಟು ತಿರಸ್ಕಾರ ಮನೋಭಾವದ ವ್ಯಕ್ತಿ ಅವರು.

    ಆ ಹೊತ್ತಿನಲ್ಲಿ ನಮ್ಮ ಮುಂದೆ ಇದ್ದ ಪತ್ರಿಕೆಯೊಂದರಲ್ಲಿ ಕೊರೋನಾ ಕಾರಣದಿಂದ ಅನಾಥರಾದ ಮಕ್ಕಳನ್ನು ಮಾರಾಟ ಮಾಡುವ ಜಾಲದ ಬಗ್ಗೆ ಒಂದು ವರದಿ ಇತ್ತು. ಅದರ ಬಗ್ಗೆ ತುಂಬಾ ವಿಷಾದನೀಯ ವ್ಯಕ್ತಪಡಿಸಿ ಮಾತು ಆರಂಭವಾಗುತ್ತಿದ್ದಂತೆ ಅವರು ಒಂದು ಮಾತು ಹೇಳಿದರು….

    ಅಮೆರಿಕಾದಲ್ಲಿ ಮಗುವೊಂದು ಅನಾಥವಾಗುವುದು ವೈಯಕ್ತಿಕವಾಗಿ ತುಂಬಾ ನೋವಿನ ವಿಷಯವಾದರು ಸಾಮಾಜಿಕವಾಗಿ ಆ ಮಗುವನ್ನು ಅದೃಷ್ಟಶಾಲಿ ಎಂದು ಪರಿಗಣಿಸಬಹುದು ಎಂದರು.

    ಕುತೂಹಲದಿಂದ ಅದು ಹೇಗೆ ಎಂದು ಕೇಳಿದೆ…….

    ಅವರ ವಿವರಣೆ……

    ಒಂದು ವೇಳೆ ಒಂದು ಮಗು ಯಾವುದೇ ಕಾರಣದಿಂದ ತಂದೆ ತಾಯಿ ಅಥವಾ ಪೋಷಕರನ್ನು ಕಳೆದುಕೊಂಡು ಅನಾಥವಾದರೆ ಇಡೀ ಅಮೆರಿಕಾದ ಸಮಾಜ ಮತ್ತು ಸರ್ಕಾರದ ಆಡಳಿತಾತ್ಮಕ ವ್ಯವಸ್ಥೆ ಆ ಮಗುವಿಗೆ ಅನಾಥ ಪ್ರಜ್ಞೆ ಕಾಡದಂತೆ ಮಗುವನ್ನು ಬೆಳೆಸುವ ನೈತಿಕ ಜವಾಬ್ದಾರಿ ಹೊರುತ್ತದೆ. ಅನಾಥ ಮಗುವಿಗೆ ಎಲ್ಲಾ ರೀತಿಯ ಗುಣಮಟ್ಟದ ಸೌಕರ್ಯಗಳನ್ನು ಕೊಡುವುದಲ್ಲದೆ ಅದಕ್ಕೆ ವಿಶೇಷ ಗೌರವ ಆತಿಥ್ಯ ನೀಡಲಾಗುತ್ತದೆ. ವಿಷಯ ತಿಳಿದಿರುವ ಪ್ರತಿಯೊಬ್ಬರು ತಮ್ಮ ಕರ್ತವ್ಯ ಎಂಬಂತೆ ಅನುಕಂಪಕ್ಕೆ ಬದಲಾಗಿ ಆತ್ಮೀಯತೆ ತೋರುತ್ತಾರೆ. ಮಗುವಿಗೆ ಯಾವುದೇ ಕೊರತೆ ಕಾಡದಂತೆ ಉತ್ತಮ ಪ್ರಜೆಯಾಗಿ ಬೆಳೆಯಲು ಎಲ್ಲಾ ರೀತಿಯ ಪ್ರೋತ್ಸಾಹ ನೀಡುತ್ತಾರೆ.  ಇದೇ ಅಲ್ಲವೇ ಮಾನವೀಯ ಮೌಲ್ಯಗಳ ನಿಜವಾದ ಸಮಾಜ.

    ಭಾರತದಲ್ಲಿ ಈ ರೀತಿಯ ಒಂದು ಮಗು ಅನಾಥವಾದರೆ ಏನಾಗಬಹುದು ಎಂಬುದನ್ನು ದಯವಿಟ್ಟು ಮುಕ್ತ ಮನಸ್ಸಿನಿಂದ ನಿಮ್ಮ ಅನುಭವದ ಆಧಾರದ ಮೇಲೆ ಊಹಿಸಿ.

    ನನ್ನ ಅನುಭವದ ಪ್ರಕಾರ,

    ಆ ಮಗುವನ್ನು ಅತ್ಯಂತ ಹೀನಾಯವಾಗಿ ಸಂಬಂಧಿಕರು, ಪರಿಚಿತರು ಅಧಿಕಾರಿಗಳು ನಡೆಸಿಕೊಳ್ಳುತ್ತಾರೆ. ಅದಕ್ಕೆ ಯಾರೂ ದಿಕ್ಕು ದೆಸೆ ಇಲ್ಲ ಎಂದು ತಿಳಿದರೆ ಆ ಮಗುವಿನ ಬಳಿ ಸಿಗರೆಟ್ ಮದ್ಯಪಾನ ತರಿಸಿಕೊಳ್ಳುವುದು, ಕೆಲವು ಸಣ್ಣ ಪುಟ್ಟ ಅಪರಾಧ ಮಾಡಿಸುವುದು, ಲೈಂಗಿಕ ದುರುಪಯೋಗ, ಸ್ವಲ್ಪ ಹಣ ನೀಡಿ ಏನೋ ಮಹಾ ಉಪಕಾರ ಮಾಡಿದಂತೆ  ಮಾತನಾಡುವುದು ಹೀಗೆ ಅದನ್ನು ತುಂಬಾ ಕೀಳಾಗಿ ಕಾಣುತ್ತಾರೆ. ಸರ್ಕಾರಿ ವ್ಯವಸ್ಥೆಯ ಬಗ್ಗೆ ಹೆಚ್ಚು ಹೇಳುವುದು ಬೇಡ. ಎಲ್ಲಾ ಇರುವವರಿಗೇ ಸಿಕ್ಕಾಪಟ್ಟೆ ತೊಂದರೆ ಕೊಡುವಾಗ ಇನ್ನೂ ಅನಾಥ ಮಗುವಿಗೆ ದಿಕ್ಕು ತೋರುವುದು ಯಾರು…..

    ಕೊನೆಗೆ ಇದು ಆ ಮಗುವಿನ ಕರ್ಮ ಎಂದು ಕರೆದು ಪಲಾಯನ ಸಿದ್ದಾಂತದ ಮೊರೆ ಹೋಗುವವರು ಹಲವರು.

    ಇಲ್ಲಿ ಇದನ್ನು ಪ್ರಸ್ತಾಪಿಸಲು ಕಾರಣ, ಪಾಶ್ಚಾತ್ಯ ಸಂಸ್ಕೃತಿಯ ಅಮೆರಿಕ ದೇಶದ ಸಮಾಜ ಅನಾಥ ಮಗುವನ್ನು ಬೆಳೆಸುವ ಪರಿ, ಹಾಗೆಯೇ ಆಧ್ಯಾತ್ಮದ ತವರೂರು, ಧಾರ್ಮಿಕ ನಿಷ್ಠೆ, ಮಾನವೀಯ ಮೌಲ್ಯಗಳ ವಕ್ತಾರರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುವ ಭಾರತೀಯ ಸಮಾಜದಲ್ಲಿ ಅನಾಥ ಮಗುವನ್ನು ಬೆಳೆಸುವ ರೀತಿಯ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳೋಣ ಎಂದು.  ಅನಾಥ ಮಕ್ಕಳನ್ನು ಭಿಕ್ಷೆಗೆ ತಳ್ಳುವ, ಮಾರಿಕೊಳ್ಳುವ, ಅಪರಾಧಗಳನ್ನಾಗಿ ಮಾಡುವ, ದುಶ್ಚಟಗಳಿಗೆ ಉಪಯೋಗಿಸಿಕೊಳ್ಳುವ ಸಮಾಜ ನಮ್ಮದಾಗುವುದು ಬೇಡ. ಪ್ರಾಕೃತಿಕ ವಿಕೋಪಗಳು, ಕೊರೋನಾ ಮುಂತಾದ ಸಾಂಕ್ರಾಮಿಕ ರೋಗಗಳು, ಅಪಘಾತಗಳು ಇತ್ಯಾದಿ ಕಾರಣದಿಂದ ಬೃಹತ್ ಜನಸಂಖ್ಯೆಯ ಭಾರತದಲ್ಲಿ ಇತ್ತೀಚಿಗೆ ಅನಾಥರಾಗುವ ಮಕ್ಕಳ ಸಂಖ್ಯೆ ಹೆಚ್ಚಾಗುತ್ತಿದೆ.

    ಇನ್ನು ಮುಂದೆ ಅಂತಹ ಮಕ್ಕಳಿಗೆ ಸಾಧ್ಯವಾದಷ್ಟು ಉತ್ತಮ ಬದುಕನ್ನು ರೂಪಿಸುವ ಕನಿಷ್ಠ ಜವಾಬ್ದಾರಿ ಸಮಾಜ ಮತ್ತು ಸರ್ಕಾರ ತೆಗೆದುಕೊಳ್ಳುಬೇಕಿದೆ. ಅದಕ್ಕೆ ಬೇಕಾದ ಕಾನೂನು ಇದೆ. ಆದರೆ ಅನುಷ್ಠಾನ ಮಾತ್ರ ಭ್ರಷ್ಟಗೊಂಡಿದೆ.

    ನಾವುಗಳು ವೈಯಕ್ತಿಕ ನೆಲೆಯಲ್ಲಿ ನಮ್ಮ ಸುತ್ತಮುತ್ತಲಿನ ಈ ರೀತಿಯ ಮಕ್ಕಳ ಬಗ್ಗೆ ಇನ್ನು ಮುಂದೆ ಸ್ವಲ್ಪ ಹೆಚ್ಚಿನ ಕಾಳಜಿ ಮತ್ತು ಆಸಕ್ತಿ ವಹಿಸೋಣ. ಅನಾಥ ಮಗುವಿಗೆ ಅನಾಥ ಪ್ರಜ್ಞೆ ಕಾಡದಂತೆ ಕನಿಷ್ಠ ನಮ್ಮ ಆತ್ಮಸಾಕ್ಷಿಗೆ ಅನುಗುಣವಾಗಿ ಒಂದು ಸಣ್ಣ ಜವಾಬ್ದಾರಿ ನಿರ್ವಹಿಸೋಣ.

    ಪರೋಪಕಾರಂ ಇದಂ ಶರೀರಂ………

    ******

    ನಿನ್ನೆ 3/12/2021 ಶುಕ್ರವಾರ ಬೆಂಗಳೂರಿನ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಆತ್ಮೀಯ ಗೆಳೆಯರ ಸಮಾಜಮುಖಿ ಚಿಂತನೆಯ ಫಲವಾಗಿ ಸ್ಥಾಪಿಸಲು ಉದ್ದೇಶಿಸಿರುವ ” ಪ್ರಬುದ್ಧ ಸಮಾಜಕ್ಕಾಗಿ ಪ್ರಬುದ್ಧ ಮನಸ್ಸುಗಳ ವೇದಿಕೆ ” ಎಂಬ ಸ್ವಯಂ ಸೇವ ಸಂಸ್ಥೆಯ ರೂಪುರೇಷೆಗಳ ಬಗ್ಗೆ ಚರ್ಚಿಸಲು ಆಹ್ವಾನಿಸಿದ್ದರು.  ವಿವಿಧ ವ್ಯಾಪಾರ ಉದ್ದಿಮೆಗಳಲ್ಲಿ ತೊಡಗಿಸಿಕೊಂಡು ಆಗಾಗ ಟ್ರಕಿಂಗ್ ಹವ್ಯಾಸದ ಈ ಗೆಳೆಯರು ಸಮಾಜಕ್ಕಾಗಿ ಮತ್ತು ಮಾನವೀಯ ಮೌಲ್ಯಗಳ ಉಳಿವಿಗಾಗಿ ಏನನ್ನಾದರೂ ಮಾಡುವ ಹೆಬ್ಬಯಕೆ ಹೊಂದಿದ್ದಾರೆ. ಶೀಘ್ರದಲ್ಲೇ ಸಂಸ್ಥೆಯನ್ನು ಅಧೀಕೃತ ನೋಂದಣಿ  ಮಾಡಿಸಿ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ನಮ್ಮ ಬರಹಗಳು ಮತ್ತು ಪಾದಯಾತ್ರೆ ಒಂದು ಸ್ಪೂರ್ತಿ ಎಂದು ಮುಕ್ತ ಮನಸ್ಸಿನಿಂದ ಹೇಳಿದರು. ಅವರಿಗೆ ತುಂಬು ಹೃದಯದಿಂದ ಧನ್ಯವಾದಗಳು.

    ನಾನು ಎಂದಿನಂತೆಯೇ ಒಬ್ಬ ಸಲಹೆಗಾರನಾಗಿ ಸದಾ ಅವರೊಂದಿಗೆ ಇರುತ್ತೇನೆ. ವೈಯಕ್ತಿಕವಾಗಿ ಯಾವುದೇ ಸಂಘ ಅಥವಾ ಸಂಸ್ಥೆಯ ಅಥವಾ ಪಕ್ಷದ ಅಥವಾ ಇನ್ನಾವುದೇ ಸಂಘಟನೆಗಳೊಂದಿಗೆ ಅಧಿಕೃತವಾಗಿ ಸೇರ್ಪಡೆಯಾಗದೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ನನ್ನನ್ನು ಆಹ್ವಾನಿಸುವ ಎಲ್ಲಾ ಪ್ರಬುದ್ಧ ಮನಸ್ಸುಗಳೊಂದಿಗೆ ಸೇರಿ ಮಾನವೀಯ ಮೌಲ್ಯಗಳ ಪುನರುತ್ಥಾನದ ಜನರ ಜೀವನಮಟ್ಟ ಸುಧಾರಿಸಲು ಪ್ರಯತ್ನಿಸುವ ಎಲ್ಲರೊಂದಿಗೆ ಸದಾ ಕೆಲಸ ಮಾಡುತ್ತೇನೆ.

    ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ.

    ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,

    ಮನಸ್ಸುಗಳ ಅಂತರಂಗದ ಚಳವಳಿ.

    ವಿವೇಕಾನಂದ. ಹೆಚ್.ಕೆ.

    9844013068

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಅಂತರಾಷ್ಟ್ರೀಯ ಪರ್ವತ ದಿನ – ಪ್ರಕೃತಿಯ ಭದ್ರವಾದ ಪರ್ವತ

    December 10, 2022

    ವಿಶ್ವದ ಮೊಟ್ಟ ಮೊದಲ ಡಾ. ಅಂಬೇಡ್ಕರ್ ಪ್ರತಿಮೆ.

    December 10, 2022

    ಅಂತರಾಷ್ಟ್ರೀಯ ಭ್ರಷ್ಟಾಚಾರ ವಿರೋಧಿ ದಿನದಂದು ಧ್ವನಿ ಮೊಳಗುತ್ತಿದೆ! ಯಾರು ಭ್ರಷ್ಟರು?

    December 8, 2022
    Our Picks

    ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ

    January 28, 2023

    ಪಾಕಿಸ್ತಾನ ರೂಪಾಯಿ ಕುಸಿತ; ದೇಶದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು

    January 28, 2023

    32 ವರ್ಷಗಳ ನಂತರ, ಕಾಶ್ಮೀರದಲ್ಲಿ ಥಿಯೇಟರ್ ಹೌಸ್‌ ಫುಲ್

    January 28, 2023

    ಜಪಾನ್‌ ನ ಆಕಾಶದಲ್ಲಿ ನೀಲಿ ಬೆಳಕಿನ ಸುರುಳಿ; ಹಾರುವ ತಟ್ಟೆಯಲ್ಲಿ ಏಲಿಯನ್‌ ಗಳು

    January 28, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕಾಂಗ್ರೆಸ್ ಬಿಟ್ಟು ಬಿಎಸ್ ಪಿ ಪಕ್ಷ ಸೇರಿದ ತಿಪಟೂರು ಕಾಂಗ್ರೆಸ್ ಮುಖಂಡ ಅಶ್ವಥ್ ನಾರಾಯಣ್

    January 28, 2023

    ತುಮಕೂರು: ಕುರುಬ ಸಮುದಾಯದ ಪ್ರಭಾವಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಅಶ್ವಥ್ ನಾರಾಯಣ್ ರವರು ಕಾಂಗ್ರೆಸ್…

    ಏರ್ ಶೋ: ಜ. 30ರಿಂದ ಫೆ. 20ರವರೆಗೆ ಮಾಂಸ ಮಾರಾಟಕ್ಕೆ ನಿಷೇಧ

    January 28, 2023

    ಮುಂದಿನ ತಿಂಗಳು 12 ಆಫ್ರಿಕನ್ ಚಿರತೆಗಳು ಭಾರತಕ್ಕೆ

    January 28, 2023

    ಮಗುವನ್ನು ಅಪಹರಿಸಿ ಹಣದ ಡಿಮ್ಯಾಂಡ್:ಪೊಲೀಸರಿಂದ ಒಂದು ವರ್ಷದ ಮಗುವಿನ ರಕ್ಷಣೆ

    January 28, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.