nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ

    February 9, 2023

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು

    February 9, 2023

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023
    Facebook Twitter Instagram
    ಟ್ರೆಂಡಿಂಗ್
    • ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ
    • ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು
    • ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು
    • ಆಂಧ್ರಪ್ರದೇಶದ ಕಾಕಿನಾಡದಲ್ಲಿ ವಿಷಾನಿಲ ಸೇವಿಸಿ ಏಳು ಮಂದಿ ಸಾವು
    • ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಹೌಸ್‌ಫುಲ್
    • ಪ್ರೇಮಿಗಳ ದಿನವನ್ನು ‘ಹಸು ಅಪ್ಪುಗೆಯ ದಿನ’ ಎಂದು ಆಚರಿಸಬೇಕು; ಕೇಂದ್ರ ಪಶುಸಂಗೋಪನಾ ಇಲಾಖೆ
    • ಮನ ಕಲಕುವ ಘಟನೆ:ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಇಬ್ಬರು ಕಂದಮ್ಮಗಳ ನರಳಾಟ
    • ನಾಳೆಯಿಂದ ಅಧಿವೇಶನ ಪ್ರಾರಂಭ ಹಾಜರಾತಿ ಖಡ್ಡಾಯ:ಸ್ಪೀಕರ್ ಕಾಗೇರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆಟೋ ಡ್ರೈವರ್ ಆದ ನಾನು, ಮತ ಬೇಡುವ ಅವರು..!
    ಲೇಖನ December 16, 2021

    ಆಟೋ ಡ್ರೈವರ್ ಆದ ನಾನು, ಮತ ಬೇಡುವ ಅವರು..!

    By adminDecember 16, 2021No Comments2 Mins Read
    vivekananda hk

    ಆಟೋ ಡ್ರೈವರ್ ಆದ ನಾನು ಇತ್ತೀಚಿನ ಚುನಾವಣಾ ಸಮಯದಲ್ಲಿ ನನ್ನ 10 ವರ್ಷದ ಮಗನೊಂದಿಗೆ

    ತರಕಾರಿ ತರಲು ಮಾರ್ಕೆಟ್ ಗೆ ಕಾಲು ನಡಿಗೆಯಲ್ಲಿ ಹೋಗಿದ್ದೆ……….

    ಹಿಂದಿರುಗಿ ಬರುವಾಗ ಒಂದು ಪಕ್ಷದ ಚುನಾವಣಾ ಪ್ರಚಾರ ಸಭೆ ನಡೆಯುತ್ತಿತ್ತು. ಜನರ ಗುಂಪು ನೋಡಿ ನನ್ನ ಮಗ ಅದನ್ನು ತೋರಿಸು ಎಂದು ಹಠ ಹಿಡಿದ. ನಾನು ಗುಂಪಿನಲ್ಲಿ ಹೋಗಿ ಕುಳಿತೆ.

    ಆ ಕ್ಷೇತ್ರದ ಅಭ್ಯರ್ಥಿ ಭಾಷಣ ಮಾಡುತ್ತಿದ್ದ.

    ” ಅಕ್ಕ ತಂಗಿಯರೇ, ಅಣ್ಣ ತಮ್ಮಂದಿರೇ, ನಾನು ನಿಮ್ಮ ಮನೆ ಮಗ, ಇಲ್ಲೇ ಹುಟ್ಟಿ ಬೆಳೆದ ಬಡ ರೈತನ ಮಗ,

    ನನಗೆ ಗೊತ್ತು ಬಡತನ ಎಷ್ಟು ಕಷ್ಟ ಅಂತ. ಒಳ್ಳೆಯ ರಸ್ತೆ ಇಲ್ಲ, ಬೀದಿ ದೀಪ ಇಲ್ಲ, ಕುಡಿಯುವ ನೀರಿಲ್ಲ, ಎಲ್ಲೆಲ್ಲೂ ಗಲೀಜು,ಬೀದಿ ನಾಯಿ ಕಾಟ, ಕಾಮುಕರು, ರೌಡಿಗಳ ತೊಂದರೆ, ಲಂಚ ಅತಿಯಾಗಿದೆ. ಹಬ್ಬ ಉತ್ಸವಗಳನ್ನು ದೊಡ್ಡ ಪ್ರಮಾಣದಲ್ಲಿ ಆಯೋಜಿಸುತ್ತೇನೆ. ದೇವ ಮಂದಿರಗಳನ್ನು ಕಟ್ಟಿಸುತ್ತೇನೆ. ನೀವು ನನ್ನನ್ನು ಗೆಲ್ಲಿಸಿದರೆ 24 ಗಂಟೆಯು ನಾನು ನಿಮಗೆ ಸೇವೆ ಸಲ್ಲಿಸುತ್ತೇನೆ. ನಾನು ನಿಮ್ಮ ಸೇವಕ. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುತ್ತೇನೆ. ನಿಮ್ಮ ಕಾಲಿಡಿದು ಕೇಳಿಕೊಳ್ಳುತ್ತೇನೆ ನನಗೇ ಮತ ನೀಡಿ.” ಎಂದು ಕಣ್ಣೀರು ಸುರಿಸಿದ.

    ನನ್ನ ಮಗನ ಕಣ್ಣಿನಲ್ಲಿಯೂ ನೀರು. ಏಕೆಂದು ಕೇಳಿದೆ.

    ” ಅಪ್ಪಾ ಇವರು ಎಷ್ಟು ಒಳ್ಳೆಯವರು. ನಮ್ಮ ಕಷ್ಟ ಎಲ್ಲಾ ಪರಿಹರಿಸುತ್ತಾರಂತೆ. ನಿನ್ನ ಓಟು ಇವರಿಗೇ ಹಾಕಪ್ಪ ”

    ಅವನ ಮುಗ್ಧತೆಗೆ ಮನದಲ್ಲೇ ನಕ್ಕು ಆಗಲಿ ಎಂದು ಹೇಳಿ ಮನೆ ಕಡೆ ಹೊರಟೆ. ಕರಳು ಚುರಕ್ ಎಂದಿತು. ಅವನು ಕೇಳದಿದ್ದರೂ ನಾನೇ ಐಸ್ ಕ್ರೀಮ್ ಕೊಡಿಸಿದೆ. ತಿನ್ನುತ್ತಾ ಬರುತಿರುವಾಗ ಸ್ವಲ್ಪ ದೂರದ ಮ್ಯೆದಾನದಲ್ಲಿ ಮತ್ತೊಂದು ಪಕ್ಷದ ಸಭೆ ನಡೆಯುತ್ತಿತ್ತು. ಅದಕ್ಕೂ ಹಠ ಮಾಡಿದ. ಹೋಗಲಿ, ಹೇಗಿದ್ದರೂ ಭಾನುವಾರ ಪರವಾಗಿಲ್ಲ ಎಂದು ಅಲ್ಲಿಗೂ ಕರೆದೊಯ್ದೆ.

    ಅಲ್ಲಿನ ಅಭ್ಯರ್ಥಿಯೂ ಮಾತನಾಡುತ್ತಿದ್ದ. “ಮಹನೀಯರೆ, ಮಹಿಳೆಯರೆ, ಹುಟ್ಟಿನಿಂದಲೇ ಸಮಾಜ ಸೇವೆಯಲ್ಲಿ ತೊಡಗಿಸಿ ಕೊಂಡಿರುವ ನನಗೆ ನಿಮ್ಮ ಸೇವೆಯನ್ನು ಹೆಚ್ಚಿಗೆ ಮಾಡಲು ಚುನಾವಣೆಗೆ ನಿಂತಿರುವೆ. ನಾನೇನಾದ್ರು ಆಯ್ಕೆಯಾದರೆ ನಿಮ್ಮ ಮನೆಬಾಗಿಲಿಗೆ ಉಚಿತ ಅಕ್ಕಿ, ರಾಗಿ, ಜೋಳ, ಎಣ್ಣೆ, ಬಟ್ಟೆ, ತಾಳಿ, ಟಿವಿ, ಲ್ಯಾಪ್ ಟಾಪ್ ಇನ್ನೂ ಎಲ್ಲಾ ಕೊಡುತ್ತೇನೆ. ನಿಮಗೆ ಆರೋಗ್ಯ, ನಿಮ್ಮ ಮಕ್ಕಳಿಗೆ ಉಚಿತ ಶಿಕ್ಷಣ, ವೃದ್ಧರಿಗೆ ಪಿಂಚಣಿ ಎಲ್ಲಾ ಕೊಡಿಸುತ್ತೇನೆ. ದಯವಿಟ್ಟು ನಿಮ್ಮ ಅಮೂಲ್ಯ ಓಟು ನನಗೇ ಕೊಡಿ.”

    ಜನರ ಜೋರು ಚಪ್ಪಾಳೆ. ನಡುವೆ ಮಗನನ್ನು ನೋಡುತ್ತೇನೆ. ಅವನು ಮತ್ತೆ ಕಣ್ಣೀರು.

    “ಅಪ್ಪಾ ಇವರು ಇನ್ನೂ ಒಳ್ಳೆಯವರು. ಎಲ್ಲಾ ಉಚಿತ ಕೊಡುತ್ತಾರೆ. ನಿನ್ನ ಓಟು ಇವರಿಗೇ ಕೊಡು”

    ಆಯ್ತು ಮಗ ಎಂದು ಹೇಳಿ ಮನೆಗೆ ಬಂದೆವು.

    ರಾತ್ರಿ  ಮಲಗಿರುವಾಗ ಕೇಳಿದ,

    ” ಅಪ್ಪಾ ಇಷ್ಟೊಂದು ಒಳ್ಳೆಯ ಜನ ಚುನಾವಣೆಗೆ ನಿಲ್ಲುವಾಗ ನೀನ್ಯಾಕೆ ಯಾವಾಗಲೂ ರಾಜಕಾರಣಿಗಳನ್ನು ಬಯ್ಯುತ್ತೀಯ. ಪಾಪ ಅವರು ಒಳ್ಳೆಯವರು. ನೀನೇ  ಸರಿಯಿಲ್ಲ. “ಎಂದ.

    ” ಮಗನೇ ನನಗೆ ಸುಮಾರು 50 ವರ್ಷ ಸಮೀಪಿಸುತ್ತಿದೆ. ನಾನು 20 ರಿಂದ 25 ಚುನಾವಣೆಗಳನ್ನು

    ನೋಡಿದ್ದೇನೆ. ಎಲ್ಲಾ ಅಭ್ಯರ್ಥಿಗಳು, ಪಕ್ಷಗಳೂ ಹೀಗೇ ಹೇಳುತ್ತವೆ. ಚುನಾವಣೆ ಮುಗಿದು ಗೆದ್ದಮೇಲೆ

    ನಾವು ಅವರನ್ನು ಭೇಟಿಯಾಗುವುದು ಅಸಾಧ್ಯ. ಒಂದು ವೇಳೆ ಭೇಟಿಯಾದರು  ಎರಡು ನಿಮಿಷ ಮಾತನಾಡಿ ಸಾಗುಹಾಕುತ್ತಾರೆ. ಅವರ ಕೆಲವು ಹಿಂಬಾಲಕರಿಗೆ ಬಿಟ್ಟರೆ ಯಾರಿಗೂ ಏನೂ ಮಾಡುವುದಿಲ್ಲ. ಚುನಾವಣಾ ಸಮಯದಲ್ಲಿ ಮಾತ್ರ ಮೊಸಳೆ ಕಣ್ಣೀರು ಸುರಿಸುತ್ತಾರೆ.” ಎಂದು ಹೇಳುತ್ತಿದ್ದಂತೆ ಮನೆಯ ಕಾಲಿಂಗ್ ಬೆಲ್ ಶಬ್ದವಾಯಿತು.

    ಬಾಗಿಲು ತೆಗೆದರೆ ಒಬ್ಬ,…..

    ” ಅಣ್ಣಾ ತಗೋ 2000 ರೂಪಾಯಿ, ಅಕ್ಕನಿಗೆ ಒಂದು ಸೀರೆ ಇದೆ. ಕವರ್ ಒಳಗೆ

    ಒಂದು ಎಣ್ಣೇ ಬಾಟಲ್ ಇಟ್ಟಿದ್ದೇನೆ. ನಮ್ಮ ಅಭ್ಯರ್ಥಿಯನ್ನ ಮರೆಯಬೇಡ “ಎಂದು ಹೇಳಿ  ಕ್ಯೆಮುಗಿದು

    ಹೊರಟ. ಇನ್ನೊಬ್ಬ ನನ್ನ ಮಗನನ್ನು ನೋಡಿ ಅವನಿಗೂ 100 ರ ನೋಟು ನೀಡಿದ.

    ಮಗನಿಗೆ ಏನೂ ಅರ್ಥವಾಗಲಿಲ್ಲ. 100 ನೋಟು ನೋಡಿ ಖುಷಿಯಾಯಿತು.

    ನನಗೆ ನನ್ನ ಮಗನ ಭವಿಷ್ಯ ನೆನಪಾಗಿ ಭಯವಾಯಿತು.

    ನಿಮಗೆ,…..

    ಏಳಿ ಎದ್ದೇಳಿ ಜಾಗೃತಗೊಳ್ಳಿ, ನಮ್ಮ ಮಕ್ಕಳ ಉತ್ತಮ ಭವಿಷ್ಯಕ್ಕಾಗಿ, …….

     

    -ವಿವೇಕಾನಂದ. ಹೆಚ್.ಕೆ.

    9844013068

    admin
    • Website

    Related Posts

    ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಈ ವಿಚಾರಗಳ ಬಗ್ಗೆ ನೀವು ತಿಳಿಯಲೇ ಬೇಕು!

    February 7, 2023

    ಬದುಕು ಧೈರ್ಯಕ್ಕೆ ಕಾರಣ

    January 29, 2023

    ಅಂತರಾಷ್ಟ್ರೀಯ ಪರ್ವತ ದಿನ – ಪ್ರಕೃತಿಯ ಭದ್ರವಾದ ಪರ್ವತ

    December 10, 2022
    Our Picks

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023

    ದಶಕಗಳ ನಂತರ ಶ್ರೀನಗರದ ಚಿತ್ರಮಂದಿರಗಳು ಹೌಸ್‌ಫುಲ್

    February 9, 2023

    ಮನ ಕಲಕುವ ಘಟನೆ:ಸಿರಿಯಾ ಮತ್ತು ಟರ್ಕಿಯಲ್ಲಿ ಭೂಕಂಪ ಇಬ್ಬರು ಕಂದಮ್ಮಗಳ ನರಳಾಟ

    February 9, 2023

    ಸಿರಿಯಾ, ಟರ್ಕಿ ಭೂಕಂಪಗಳು; ಸಾವಿನ ಸಂಖ್ಯೆ 15,000 ದಾಟಿದೆ

    February 9, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಕೋಲಾರದಲ್ಲಿ ತಂದೆ ವರುಣಾದಲ್ಲಿ ಮಗ ಚುನಾವಣೆಲ್ಲಿ ಸ್ಫರ್ಧೆ

    February 9, 2023

    ಮೈಸೂರು: ಕೋಲಾರ ಕ್ಷೇತ್ರದಿಂದ  ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ ಎಂಬ ಚರ್ಚೆಗಳ ಬೆನ್ನಲ್ಲೆ ಅವರ ಪುತ್ರ ಡಾ.ಯತಿಂದ್ರ ವರುಣಾ ಕ್ಷೇತ್ರದಲ್ಲಿ ಸಂಚಾರ ನಡೆಸುತ್ತಿದ್ದು…

    ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರು

    February 9, 2023

    ರಬ್ಬರ್ ಆಮದಿಗೆ ಸಂಬಂಧಿಸಿದ ಕೇಂದ್ರ ಬಜೆಟ್ ಘೋಷಣೆಗಳು

    February 9, 2023

    ಆಂಧ್ರಪ್ರದೇಶದ ಕಾಕಿನಾಡದಲ್ಲಿ ವಿಷಾನಿಲ ಸೇವಿಸಿ ಏಳು ಮಂದಿ ಸಾವು

    February 9, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.