nammatumakuru

    Subscribe to Updates

    Get the latest creative news from FooBar about art, design and business.

    What's Hot

    ಫೆ.18ರಂದು ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ

    February 8, 2023

    ಖರೀದಿ ಪ್ರಕ್ರಿಯೆ ನಿಧಾನ: ಎರಡು ಕಿಲೋ ಮೀಟರ್ ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತ ರಾಗಿ ತುಂಬಿದ ಟ್ರ್ಯಾಕ್ಟರ್ ಗಳು

    February 8, 2023

    ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ

    February 8, 2023
    Facebook Twitter Instagram
    ಟ್ರೆಂಡಿಂಗ್
    • ಫೆ.18ರಂದು ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ
    • ಖರೀದಿ ಪ್ರಕ್ರಿಯೆ ನಿಧಾನ: ಎರಡು ಕಿಲೋ ಮೀಟರ್ ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತ ರಾಗಿ ತುಂಬಿದ ಟ್ರ್ಯಾಕ್ಟರ್ ಗಳು
    • ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ
    • ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ
    • ತುಮಕೂರು: ಇಂದಿನಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ—2023 | ಸಾಂಸ್ಕೃತಿ ಕಾರ್ಯಕ್ರಮಗಳು
    • ಜಾತಿ ಕುಮಾರಸ್ವಾಮಿಯವರಿಗೆ ಶೋಭೆಯಲ್ಲ: ಸಂಜಯ ಪಾಟೀಲ
    • ಶಾಲೆಗೆ ಹೋದ ಬಾಲಕ ಟ್ರ್ಯಾಕ್ಟರ್ ಗೆ ಸಿಲುಕಿ ಸಾವು
    • ಶಾಸಕ ಸಿ.ಟಿ.ರವಿಗೆ ಟಾಂಗ್ ಕೊಟ್ಟ ಸಿದ್ಧರಾಮಯ್ಯ,
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ಸಾಹಿತ್ಯ ಲೋಕದ ಸಾಮ್ರಾಟ ಕುವೆಂಪು
    ಲೇಖನ December 30, 2021

    ಕನ್ನಡ ಸಾಹಿತ್ಯ ಲೋಕದ ಸಾಮ್ರಾಟ ಕುವೆಂಪು

    By adminDecember 30, 2021No Comments3 Mins Read
    kuvempu
    • ವಿವೇಕಾನಂದ ಹೆಚ್.ಕೆ.

    ಕನ್ನಡ ಸಾಹಿತ್ಯ ಲೋಕದ ಸಾಮ್ರಾಟ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ಬರವಣಿಗೆ –  ಸಾಹಿತ್ಯ – ಕನ್ನಡ ಭಾಷೆ ಕುರಿತ ಒಂದಷ್ಟು ಮಾತುಕತೆ…… ( ಡಿಸೆಂಬರ್ 29 )

    ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ  ಎಂಬ ಮಲೆನಾಡಿನ ವ್ಯಕ್ತಿಯೊಬ್ಬರು ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಎಂಬ ಭಾಷೆಯನ್ನು – ಸಂಸ್ಕೃತಿಯನ್ನು – ಕನ್ನಡ ಮಣ್ಣಿನ ಸಾಂಸ್ಕೃತಿಕ ಪ್ರಜ್ಞೆಯನ್ನು ಮುಗಿಲೆತ್ತರಕ್ಕೆ ಏರಿಸಿ ಅದರ ಗಡಿಯನ್ನು ವಿಸ್ತರಿಸಿ ಭಾಷೆಯ ಮಹತ್ವ ಸಾರಿದವರು. ಅಕ್ಷರಗಳಲ್ಲಿ ಕೇವಲ ಭಾವನೆಗಳನ್ನು ಮಾತ್ರ ತುಂಬದೆ ಒಂದು ನಾಡಿನ ಮನುಷ್ಯ ಪ್ರಜ್ಞೆಯನ್ನು ಚಿಂತನೆಯಾಗಿಸಿ ವಿಶ್ವ ಮಾನವತೆಗೆ ದಾರಿ ತೋರಿದ ಅದ್ಬುತ ಚಿಂತಕ.

    ಅವರ ನೆನಪಿನ ನೆಪದಲ್ಲಿ ಒಂದಷ್ಟು ಅಕ್ಷರಗಳ ಆತ್ಮಾವಲೋಕನ……

    ಬರವಣಿಗೆ…..

    ಅಕ್ಷರಗಳ ಸಂಶೋಧನೆಯೊಂದಿಗೆ ಉಗಮವಾದ ಅದ್ಭುತ ಸೃಷ್ಟಿ ಈ ಬರವಣಿಗೆ. ಅಕ್ಷರಗಳಿಗಿಂತ ಮೊದಲು ಸಹ ಬರವಣಿಗೆ ಅಸ್ತಿತ್ವದಲ್ಲಿತ್ತು. ಆದರೆ ಚಿತ್ರ, ಸಂಜ್ಞೆ ಮುಂತಾದ ವಿಚಿತ್ರ ವೈಶಿಷ್ಟ್ಯ ರೂಪದಲ್ಲಿ ಅದು ಬಳಕೆಯಲ್ಲಿತ್ತು.

    ಬರವಣಿಗೆ ಅದೊಂದು ಬರೆಯುವ ಕ್ರಿಯೆ ಅಥವಾ ಅಭಿಪ್ರಾಯ ವ್ಯಕ್ತಪಡಿಸುವ ಮಾರ್ಗ ಅಥವಾ ಭಾವನೆಗಳ ದಾಖಲೀಕರಣ ಅಥವಾ ಅಕ್ಷರಗಳ ಜೋಡಣಾ ಸ್ವಾತಂತ್ರ್ಯ ಅಥವಾ ಭಾಷೆಯ ಕ್ರಮಬದ್ಧ ಉಪಯೋಗ ಅಥವಾ ಸಂಪರ್ಕ ಮಾಧ್ಯಮ ಅಥವಾ

    ಮನುಷ್ಯನ ಒಂದು ಕಲಾ ಪ್ರಕಾರ ಹೀಗೆ ನಾನಾ ರೀತಿಯ ಉತ್ತರಗಳನ್ನು ಹುಡುಕಿ ಹೇಳಬಹುದು. ಯಾವಾಗ ಬರಹ ಒಂದು ಕ್ರಮಬದ್ಧತೆಯನ್ನು ಪಡೆಯಿತೋ ನಂತರದಲ್ಲಿ  ವಿವಿಧ ಭಾಷೆಗಳು ಬೆಳವಣಿಗೆ ಹೊಂದಿದವು. ಅಕ್ಷರ ಸಂಶೋಧನೆಗು ಮೊದಲು ಭಾಷೆಗಳು ಅಸ್ತಿತ್ವದಲ್ಲಿದ್ದವು. ಆದರೆ ಲಿಪಿ ಇರಲಿಲ್ಲ. ಲಿಪಿಯ ಉಗಮದ ನಂತರ ಭಾಷೆಗಳು ಮಹತ್ವ ಪಡೆದುಕೊಂಡವು.

    ಲ್ಯಾಟಿನ್, ಪ್ರಾಕೃತ, ಪಾಲಿ, ಪಾರ್ಸಿ, ಸ್ಪಾನಿಷ್,  ಚೀನೀ, ಅರಬ್ಬೀ, ಪರ್ಷಿಯನ್, ಸಂಸ್ಕೃತ ಭಾಷೆಗಳು ಅತ್ಯಂತ ಪ್ರಾಚೀನ ಎಂದು ಹೇಳಲಾಗುತ್ತದೆ. ನನಗೆ ಈ ವಿಷಯದಲ್ಲಿ ತುಂಬಾ ಸ್ಪಷ್ಟವಾಗಿ ಮತ್ತು ಆಳವಾಗಿ ತಿಳಿದಿಲ್ಲ. ಸಾಮಾನ್ಯ ಜ್ಞಾನ ಮಾತ್ರ ಇದೆ. ಖಚಿತವಾಗಿ ತಿಳಿದ  ಭಾಷಾ ತಜ್ಞರು ಇನ್ನಷ್ಟು ಮಾಹಿತಿ ಹಂಚಿಕೊಳ್ಳಬಹುದು.

    ಇತಿಹಾಸ ಏನೇ ಇರಲಿ ಬರವಣಿಗೆ ಎಂಬುದು ಮಾನವ ನಾಗರಿಕತೆಯ ಎಲ್ಲವನ್ನೂ ಅಡಗಿಸಿಕೊಂಡು ಅದನ್ನು ಇಲ್ಲಿಯವರೆಗೂ ಮುನ್ನಡೆಸಿಕೊಂಡು ಬಂದ ಅತ್ಯುತ್ತಮ ವಾಹಕ. ಬರಹಗಳ ಮೂಲಗಳು, ರೀತಿಗಳು, ಉಪಕರಣಗಳು, ಪ್ರಕಾರಗಳು, ರೂಪಗಳು, ಉದ್ದೇಶಗಳು, ಲಿಪಿಗಳು, ಭಾಷೆಗಳು ಎಷ್ಟೇ ಇರಬಹುದು ಆದರೆ ಬರಹ ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿದೆ. ಬರಹವಿಲ್ಲದೆಯೂ ಮನುಷ್ಯ ಬದುಕಬಹುದು ಮತ್ತು ಈಗಲೂ ಬಹಳಷ್ಟು ಜನ ಬದುಕುತ್ತಿದ್ದಾರೆ ಅದು ಅನಿವಾರ್ಯವಲ್ಲ. ಆದರೆ ಬರಹವಿಲ್ಲದಿದ್ದರೆ ಮನುಷ್ಯ ಕಳೆದುಕೊಳ್ಳುತ್ತಿದ್ದುದು ಏನು ಎಂದು ಯೋಚಿಸಿದಾಗ ಬರಹದ ಮಹತ್ವ ಅರ್ಥವಾಗುತ್ತದೆ.

    ಬರಹವನ್ನು ಆಕಾಶದ ಅನಂತತೆಗೆ ಹೋಲಿಸಬಹುದು. ಅಕ್ಷರಗಳೇ ಬರಹದ ಮೂಲವಾದರು ಇಂದು ಅದೇ ಅಕ್ಷರಗಳಲ್ಲಿ ಬರಹದ ಸರಿಯಾದ ಮತ್ತು ಸ್ಪಷ್ಟವಾದ ಅರ್ಥವನ್ನು ಹಿಡಿದಿಡುವುದು ಸಾಧ್ಯವಿಲ್ಲ. ಅದು ಅಕ್ಷರವನ್ನು ಮೀರಿ ಬೆಳೆದಿದೆ. ಮನುಷ್ಯನ ಭಾವನೆ ಮತ್ತು ಬುದ್ದಿಶಕ್ತಿ ಬೆಳವಣಿಯಲ್ಲಿ ಅಕ್ಷರ ಮತ್ತು ಭಾಷೆ ಕೇವಲ ಮೆಟ್ಟಿಲಿನಂತೆ ಕೆಲಸ ಮಾಡುತ್ತಿದೆ. ಆತನ ಮನಸ್ಸೇ ಆತನ ತಲೆಯ ಮೇಲೆ ಕಿರೀಟದಂತೆ ಬಂದು ಕುಳಿತಿದೆ.

    ಎಲ್ಲಾ ಪರಿವರ್ತನೆಗಳ ಬಳಿಕ ಬರವಣಿಗೆ ” ಸಾಹಿತ್ಯ ” ಎಂಬ ಪ್ರಕಾರದಲ್ಲಿ ಹೆಚ್ಚು ಪ್ರಕಾಶಮಾನವಾಗಿ, ಜನಪ್ರಿಯವಾಗಿ ರಾರಾಜಿಸುತ್ತಿದೆ.” ಖಡ್ಗಕ್ಕಿಂತ ಲೇಖನ ಹರಿತ ” ಎಂಬುದು ಹಳೆಯ ಮಾತು. ಈಗ ಬರಹಗಳು ಬಾಂಬು ಬಂದೂಕುಗಳಿಗಿಂತ ಪ್ರಬಲವಾಗಿ ಕೆಲಸ ಮಾಡುತ್ತಿದೆ. ಕ್ರಾಂತಿಯ ಮೂಲದ್ರವ್ಯವಾಗಿಯೂ ಉಪಯೋಗಿಸಲಾಗುತ್ತಿದೆ.

    ಬರಹ ನಮ್ಮನ್ನು ನಗಿಸುತ್ತದೆ, ಅಳಿಸುತ್ತದೆ, ಕೋಪವೂ ಸೇರಿ ನವ ರಸಗಳನ್ನು ಉತ್ಪತ್ತಿಮಾಡುತ್ತದೆ. ಹಾಗೆಯೇ ಬರಹ ಮೋಸ ವಂಚನೆ ದ್ರೋಹಗಳನ್ನು ಎಸಗುತ್ತದೆ.

    ಕೆಲವು ಉತ್ಕೃಷ್ಟ ಬರಹಗಳು, ಕೆಲವು ಸಾಧಾರಣ ಬರಹಗಳು ಮತ್ತೆ ಕೆಲವನ್ನು ಕಳಪೆ ಬರಹಗಳು ಎಂಬುದಾಗಿಯೂ ವಿಂಗಡಿಸಲಾಗುತ್ತದೆ. ಇಲ್ಲಿ ಬರವಣಿಗೆಯ ಸಾಮರ್ಥ್ಯ ಮತ್ತು ಓದುಗರ ಸಾಮರ್ಥ್ಯ ಎರಡೂ ಪರೀಕ್ಷೆ ಒಳಪಡುತ್ತದೆ.

    ಒಬ್ಬ ವ್ಯಕ್ತಿ ಬರಹಗಾರನಾಗಲು ಅರ್ಹತೆ ಮತ್ತು  ಮಾನದಂಡಗಳೇನು ಎಂಬುದು ನಿರ್ದಿಷ್ಟವಾಗಿ ಇಲ್ಲ. ಆಸಕ್ತಿಯೇ ಮುಖ್ಯ. ಆ ಆಸಕ್ತಿ ಆತನ ಬರಹ ಶಕ್ತಿಯ ಮುಖಾಂತರ ಅರ್ಹತೆಯಾಗಿ ಪರಿವರ್ತನೆ ಹೊಂದುತ್ತದೆ.

    ಆದರೆ ಬರಹ ಇಷ್ಟೊಂದು ಸರಳವಾಗಿಲ್ಲ. ಕೋಟಿ ಕೋಟಿ ಬರಹಗಾರರಿದ್ದಾರೆ. ವಿಶ್ವಮಟ್ಟದಲ್ಲಿ ಸಾಹಿತ್ಯಕ್ಕಾಗಿ ನೊಬೆಲ್ ಮತ್ತು ಭಾರತದಲ್ಲಿ ಜ್ಞಾನಪೀಠ ಎಂಬ ಅತ್ಯುನ್ನತ ಪ್ರಶಸ್ತಿಗಳನ್ನು ಸ್ಥಾಪಿಸಲಾಗಿದೆ. ಅಲ್ಲದೆ ಇನ್ನೂ ಹಲವಾರು ಪ್ರಶಸ್ತಿ ಬಿರುದುಗಳು ಇವೆ.

    ಬರವಣಿಗೆ ಹವ್ಯಾಸವು ಹೌದು, ವೃತ್ತಿಯೂ ಹೌದು, ಸಾಧನೆಯಾಗಿಯೂ ಗುರುತಿಸಲಾಗುತ್ತದೆ. ಬರಹಗಳಿಂದಲೇ ಬದುಕನ್ನು ಕಟ್ಟಿಕೊಂಡವರು ಇದ್ದಾರೆ, ಬರಹದಿಂದ ಹಣ ಅಧಿಕಾರ ಜನಪ್ರಿಯತೆ ಪಡೆದವರು ಇದ್ದಾರೆ, ಬರಹವನ್ನೇ ನಂಬಿ ಅನೇಕ ಕಷ್ಟ ನಷ್ಟಗಳಿಗೆ ಒಳಗಾದವರು ಸಹ ಸಾಕಷ್ಟು ಇದ್ದಾರೆ.

    ಓದು ಬರಹಗಳು ಮನುಷ್ಯರನ್ನು ಹೆಚ್ಚು ನಾಗರಿಕವಾಗಿ ಮತ್ತು ಮಾನವೀಯವಾಗಿ ವರ್ತಿಸುವಂತೆ ಪ್ರೇರೇಪಿಸುತ್ತದೆ ಎಂಬ ಅಭಿಪ್ರಾಯವಿತ್ತು. ಆದರೆ ಅದು ಇತ್ತೀಚಿನ ಆಧುನಿಕ ಸಂದರ್ಭದಲ್ಲಿ ಅಷ್ಟೇನು ನಿಜವಲ್ಲ, ಬದಲಾಗಿ ಅವು ಆತನ ವ್ಯಕ್ತಿತ್ವವನ್ನು ಸಂಕುಚಿತ ಗೊಳಿಸುತ್ತಿದೆ ಎಂಬ ಆರೋಪಗಳು ಬಲವಾಗಿ ಕೇಳಿ ಬರುತ್ತಿದೆ. ಓದು ಬರಹಗಳೇ ಬೇರೆ, ವಾಸ್ತವ ಬದುಕೇ ಬೇರೆ ಎಂದು ಕೆಲವರು ಹಾಸ್ಯ ಮಾಡುತ್ತಾರೆ.

    ಮೊದಲಿಗೆ ಬರವಣಿಗೆ ಎಂಬುದು ಕೆಲವೇ ಕೆಲವು ಜನರ ಸ್ವತ್ತಾಗಿತ್ತು. ಮಾಧ್ಯಮಗಳ ಉಗಮದೊಂದಿಗೆ ಇನ್ನೂ ಹೆಚ್ಚು ಜನ ಬರಹಗಾರರಿಗೆ ವೇದಿಕೆ ದೊರೆಯಿತು. ಆದರೆ ಸಾಮಾಜಿಕ ಜಾಲತಾಣಗಳ ಅಭಿವೃದ್ಧಿಯೊಂದಿಗೆ ಬರವಣಿಗೆ ಸಾಮಾನ್ಯ ಜನರಿಗೂ ಬಾಗಿಲು ತೆರೆಯಿತು.

    ಈಗ ಅಕ್ಷರ ಬಲ್ಲ, ಮೊಬೈಲ್ ಕಂಪ್ಯೂಟರ್ ಲ್ಯಾಪ್ ಟಾಪ್ ಮುಂತಾದ ವಸ್ತುಗಳನ್ನು ಹೊಂದಿರುವ ಎಲ್ಲರೂ ಏನಾದರೂ ಬರೆಯಲು ಪ್ರಾರಂಭಿಸಿದ್ದಾರೆ ಅಥವಾ ಕನಿಷ್ಠ ಕೆಲವು ವಿಷಯಗಳ ಬಗ್ಗೆ ತಮ್ಮ ಅಭಿಪ್ರಾಯವನ್ನಾದರು ವ್ಯಕ್ತಪಡಿಸುತ್ತಾರೆ. ಇದೊಂದು ಕ್ರಾಂತಿಕಾರಕ ಬದಲಾವಣೆ.

    ಆದರೆ ಬರೆಯುವ ರೀತಿ, ವಿಷಯಗಳು, ಉದ್ದೇಶಗಳು ಅನೇಕ ಒಳ್ಳೆಯ ಮೌಲ್ಯಗಳನ್ನು ವಿನಾಶದ ಅಂಚಿಗೆ ತಂದು ನಿಲ್ಲಿಸುತ್ತಿದೆ. ಬರವಣಿಗೆ ವ್ಯಾಪಾರವಾಗಿದೆ, ಅಷ್ಟೇ ಅಲ್ಲ ಬರವಣಿಗೆ ವಿಷಯುಕ್ತ ಕತ್ತಿಯಾಗಿದೆ. ಬರಹಗಾರ ವಿಷ ಉಗುಳುವ ಹಾವಿನಂತಾಗಿದ್ದಾನೆ. ಬರಹಗಳು ನಿಯಂತ್ರಣ ಕಳೆದುಕೊಳ್ಳುತ್ತಿವೆ. ಸಮಾಜದ ಸ್ವಾಸ್ಥ್ಯ ಕೆಡಿಸುತ್ತಿದೆ.

    ಸಾಹಿತ್ಯವಾಗಿ ಬರಹ ಒಂದು ಅತ್ಯದ್ಭುತ ಪ್ರಯೋಗ. ಅದೇ ಪ್ರಯೋಗ ಮಾನವ ಜನಾಂಗದ ವಿನಾಶಕ್ಕೂ ಕಾರಣವಾಗುತ್ತಿದೆ. ಅದರ ಬಗ್ಗೆ ಎಚ್ಚರಿಕೆ ಅಗತ್ಯ ಎಂದು ಬರಹದ ಮುಖಾಂತರವೇ ಮನವಿ ಮಾಡಿಕೊಳ್ಳಬೇಕಾಗಿದೆ.

    ಬರವಣಿಗೆ ಮತ್ತು ಬರಹಗಾರ,

    ಬದುಕು ಮತ್ತು ಸಮಾಜದ ಶುದ್ಧ ಚಾರಿತ್ರ್ಯ ಮತ್ತು ವ್ಯಕ್ತಿತ್ವದ ಪ್ರತಿಬಿಂಬವಾಗುವ ಭವಿಷ್ಯದ ಕನಸು ಕಾಣುತ್ತಾ…….

    ಬರವಣಿಗೆ ಸಾಹಿತ್ಯವಾಗಿ ಬೆಳವಣಿಗೆ ಹೊಂದುವ ಪ್ರಕ್ರಿಯೆ ಕುರಿತು ನಾಳೆ ಮುಂದುವರಿಸಲಾಗುವುದು……

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ರಾಷ್ಟ್ರಕವಿ ಜಿ.ಎಸ್.ಶಿವರುದ್ರಪ್ಪ ಅವರ ಈ ವಿಚಾರಗಳ ಬಗ್ಗೆ ನೀವು ತಿಳಿಯಲೇ ಬೇಕು!

    February 7, 2023

    ಬದುಕು ಧೈರ್ಯಕ್ಕೆ ಕಾರಣ

    January 29, 2023

    ಅಂತರಾಷ್ಟ್ರೀಯ ಪರ್ವತ ದಿನ – ಪ್ರಕೃತಿಯ ಭದ್ರವಾದ ಪರ್ವತ

    December 10, 2022
    Our Picks

    ದ್ವೇಷದ ಅಪರಾಧಗಳಲ್ಲಿ ರಾಜಿ ಇಲ್ಲ: ಸುಪ್ರೀಂ ಕೋರ್ಟ್

    February 7, 2023

    ಪೋಪ್ ಫ್ರಾನ್ಸಿಸ್ ಭಾರತಕ್ಕೆ; ಕೇರಳ ಮತ್ತು ಗೋವಾಕ್ಕೆ ಭೇಟಿ

    February 6, 2023

    ಇಂಡಿಯಾ ಎನರ್ಜಿ ವೀಕ್ ಉದ್ಘಾಟನೆ:ಪ್ರಧಾನಿ ನರೇಂದ್ರ ಮೋದಿ

    February 6, 2023

    ಸಂಗೀತ ಕ್ಷೇತ್ರದ ಮಾಣಿಕ್ಯ:ಲತಾ ಮಂಗೇಶ್ಕರ್ ನಿಧನರಾಗಿ ಒಂದು ವರ್ಷ

    February 6, 2023
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಫೆ.18ರಂದು ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ

    February 8, 2023

    ತುರುವೇಕೆರೆ: ತಾಲೂಕಿನ ಬಾಣಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎ.ಹೊಸಹಳ್ಳಿ ಗ್ರಾಮದಲ್ಲಿ ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಎರಡನೇ ವರ್ಷದ…

    ಖರೀದಿ ಪ್ರಕ್ರಿಯೆ ನಿಧಾನ: ಎರಡು ಕಿಲೋ ಮೀಟರ್ ಗೂ ಹೆಚ್ಚು ದೂರ ಸಾಲುಗಟ್ಟಿ ನಿಂತ ರಾಗಿ ತುಂಬಿದ ಟ್ರ್ಯಾಕ್ಟರ್ ಗಳು

    February 8, 2023

    ಶಾಸಕರ ಮಾತಿಗೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಕ್ಷೇತ್ರ ಶಿಕ್ಷಣಾಧಿಕಾರಿ ಪದ್ಮನಾಭ: ಸೋಮನಹಳ್ಳಿ ಜಗದೀಶ್ ಆರೋಪ

    February 8, 2023

    ಆರ್ಚ್ ಬಿಷಪ್ ಇಗ್ನೇಷಿಯಸ್ ಪಿಂಟೋ ನಿಧನ

    February 8, 2023

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2023 | All Right Reserved nammatumakuru.com.
    Powerd By Blueline Computers

    Type above and press Enter to search. Press Esc to cancel.