ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ನಟ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಮಂತ್ರಾಲಯದಲ್ಲಿ ಇಂದು ಮಾತನಾಡಿರುವ ನಟ ಶಿವರಾಜ್ ಕುಮಾರ್, ನಾಡು ನುಡಿ ಗಡಿ ವಿಚಾರದಲ್ಲಿ ನಾವೆಲ್ಲಾ ಒಗ್ಗಟ್ಟಾಗಿರಬೇಕು. ನಾವು ಎಲ್ಲಿದ್ದೇವೆ. ಯಾವ ಮಣ್ಣಿನಲ್ಲಿ ಇದ್ದೇವೆಂಬುದು ಮುಖ್ಯ. ನಮ್ಮ ನೆಲೆ ಜಲ ಭಾಷೆಗೆ ಗೌರವ ನೀಡುವುದು ನಮ್ಮೆಲ್ಲರ ಧರ್ಮ ಎಂದಿದ್ದಾರೆ.
ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ಇತ್ತ ಕಳೆದ ಎರಡು ದಿನಗಳ ಹಿಂದೆ ಬೆಳಗಾವಿಯ ಗೋಗಟೆ ಕಾಲೇಜಿನಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ಸಹಪಾಠಿಗಳು ಹಲ್ಲೆ ನಡೆಸಿದ ಘಟನೆಗೆ ನಾಡಿನಲ್ಲಿ ಆಕ್ರೋಶದ ಕಿಡಿ ಹೊತ್ತಿ ಉರಿದಿತ್ತು. ಹಾಗೆಯೇ ಡಿಸೆಂಬರ್ 6ಕ್ಕೆ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಆಗಮಿಸುತ್ತಿದ್ದು ಇದಕ್ಕೆ ಕನ್ನಡಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy