ರಾಜ್ಯದ 10 ಜಿಲ್ಲೆಗಳಲ್ಲಿ ಸರ್ಕಾರ ಮುಸ್ಲಿಮರಿಗಾಗಿ ಸರ್ಕಾರ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ಮುಂದಾಗಿದೆ ಎಂದು ಕೆಲವು ದಿನಗಳ ಹಿಂದೆ ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.
ಪ್ರಮೋದ್ ಮುತಾಲಿಕ್ ಸೇರಿದಂತೆ ಹಿಂದೂ ಪರ ಸಂಘಟನೆಗಳು ಸರ್ಕಾರದ ನಡೆಗೆ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ ಬಳಿಕ ಮುಖ್ಯಮಂತ್ರಿ ಬೊಮ್ಮಾಯಿ ಆ ಬಗ್ಗೆ ಚರ್ಚೆಯೇ ನಡೆದಿಲ್ಲ, ಅಂಥ ವಿಚಾರ ಸರ್ಕಾರದ ಮುಂದಿಲ್ಲ ಎಂದಿದ್ದರು. ಸಚಿವೆ ಶಶಿಕಲ್ಲಾ ಜೊಲ್ಲೆ ಇದು ಸತ್ಯಕ್ಕೆ ದೂರವಾದ ಮಾತು ಎಂದು ಟ್ವೀಟ್ ಮಾಡಿದ್ದರು.
ಇದೀಗ ಹಿಂದೂ ಮುಖಂಡರೊಬ್ಬರು ಮುಸ್ಲಿಂ ಕಾಲೇಜು ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ನೀಡಿರುವ ಆದೇಶದ ಪ್ರತಿಯನ್ನು ಬಿಡುಗಡೆ ಮಾಡಿ ಸಿಎಂ ಬೊಮ್ಮಾಯಿಯನ್ನು ಉತ್ತರಿಸಿ ಎಂದು ಹೇಳಿದ್ದಾರೆ.
ಹಿಂದೂ ಪರ ಹೋರಾಟಗಾರ ಮೋಹನ ಗೌಡ ಸರ್ಕಾರದ ಆದೇಶ ಪ್ರತಿ ಟ್ವೀಟ್ ಮಾಡಿ ಸರ್ಕಾರ ಜುಲೈ ತಿಂಗಳಿನಲ್ಲಿ 10 ಪ್ರತ್ಯೇಕ ಮುಸಲ್ಮಾನ್ ಕಾಲೇಜು ಸ್ಥಾಪನೆ ಮಾಡಲು ಆದೇಶ ನೀಡಿ, ಅದಕ್ಕೆ ಹಣ ಸಹ ಮಂಜೂರು ಮಾಡಲು ಮಾಡಲು ಆದೇಶ ನೀಡಿ, ಈಗ ಸರಕಾರದ ಮುಂದೆ ಯಾವುದೇ ಮುಸಲ್ಮಾನ ಕಾಲೇಜು ಸ್ಥಾಪನೆಯ ಪ್ರಸ್ತಾಪ ಇಲ್ಲ ಎಂದು ಹೇಳುವುದು ಎಷ್ಟು ಹಾಸ್ಯಾಸ್ಪದ ಎಂದು ಪ್ರಶ್ನಿಸಿದ್ದಾರೆ.
ಮೋಹನ ಗೌಡ ಅವರು ಮುಸ್ಲಿಂ ಕಾಲೇಜು ನಿರ್ಮಾಣ ಮಾಡುವ ವಿಚಾರವಾಗಿ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಸರ್ಕಾರದ ಉಪಕಾರ್ಯದರ್ಶಿ ಆದೇಶ ಪ್ರತಿ ಟ್ವೀಟ್ ಮಾಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy