ಪಶ್ಚಿಮ ಬಂಗಾಳದ ಪುರ್ಬಾ ಮೇದಿನಿಪುರ ಜಿಲ್ಲೆಯ ಭೂಪತಿನಗರ ಪ್ರದೇಶದಲ್ಲಿ ತೃಣಮೂಲ ಕಾಂಗ್ರೆಸ್ ಬೂತ್ ಅಧ್ಯಕ್ಷ ರಾಜ್‌ಕುಮಾರ್ ಮನ್ನಾ ಅವರ ಮನೆಯಲ್ಲಿ ಬಾಂಬ್ ಸ್ಫೋಟಗೊಂಡು ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ.
ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರಲ್ಲಿ ಒಬ್ಬರನ್ನು ಸ್ಥಳೀಯ ತೃಣಮೂಲ ಮತಗಟ್ಟೆ ಅಧ್ಯಕ್ಷ ರಾಜ್‌ಕುಮಾರ್ ಮನ್ನಾ ಎಂದು ಗುರುತಿಸಲಾಗಿದೆ.
ಕಚ್ಚಾ ಬಾಂಬ್ ತಯಾರಿಕೆ ವೇಳೆ ಸ್ಫೋಟ ಸಂಭವಿಸಿದೆ ಎಂದು ಬಿಜೆಪಿ ಆರೋಪಿಸಿದೆ. ನವೆಂಬರ್ 6ರಂದು ಪಶ್ಚಿಮ ಬಂಗಾಳದ ದೇಗಂಗಾದಲ್ಲಿ ಟಿಎಂಸಿ ನಾಯಕನ ಮನೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಈ ಬಾಂಬ್ ಸ್ಫೋಟದಲ್ಲಿ ಇಬ್ಬರು ಗಾಯಗೊಂಡಿದ್ದರು. ಕೆಲವು ಕಾರ್ಮಿಕರು ಸ್ಥಳೀಯ ಟಿಎಂಸಿ ನಾಯಕರ ನಿರ್ಮಾಣ ಹಂತದ ಮನೆಯಲ್ಲಿ ಕೆಲಸ ಮಾಡುತ್ತಿದ್ದರು. ಕೆಲವು ಬಾಂಬ್‌ಗಳನ್ನು ಮನೆಯ ಮೆಟ್ಟಿಲುಗಳ ಕೆಳಗೆ ಇಡಲಾಗಿತ್ತು. ಕಾರ್ಮಿಕರು ಬಾಂಬ್‌ಗಳನ್ನು ಸ್ಪರ್ಶಿಸಿದ ತಕ್ಷಣ ಭಾರೀ ಶಬ್ದದೊಂದಿಗೆ ಸ್ಫೋಟವಾಗಿದೆ ಎನ್ನಲಾಗುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy