ಗುಜರಾತ್ ವಿಧಾನಸಭಾ ಚುನಾವಣೆಯ 2ನೇ ಹಂತದ ಮತದಾನ ಈಗಾಗಲೇ ಪ್ರಾರಂಭವಾಗಿದ್ದು, ಜನರು ಹಾಗೂ ರಾಜಕೀಯ ನಾಯಕರು ಗಣ್ಯರು ತಮ್ಮ ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ.
ಅಹಮದಾಬಾದ್ ನ ಸಬರಿಮತಿ ಕ್ಷೇತ್ರದ ರಾಣಿಪ್ ಮತಗಟ್ಟೆಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, ಎಲ್ಲರೂ ತಮ್ಮ ಹಕ್ಕು ಚಲಾಯಿಸಬೇಕು. ಗುಜರಾತ್ ಚುನಾವಣೆ ಜೊತೆಗೆ ದೇಶಾದ್ಯಂತ ಹಲವೆಡೆ ಉಪಚುನಾವಣೆಗಳು ಕೂಡ ನಡೆಯುತ್ತಿವೆ. ಈ ಚುನಾವಣೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನಿ ನರೇಂದ್ರ ಮೋದಿ ಜನರಿಗೆ ಮನವಿ ಮಾಡಿದರು.
ಹಾಗೆಯೇ ಮತದಾನ ಪ್ರಕ್ರಿಯೆಯೆಲ್ಲಿ ಭಾಗಿಯಾಗುತ್ತಿರುವ ಜನತೆಗೆ ಧನ್ಯವಾದ . ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಮಾಡುವುದು ಎಲ್ಲರ ಹಕ್ಕು. ಶಾಂತಿಯುತ ಮತದಾನಕ್ಕೆ ವ್ಯವಸ್ಥೆ ಮಾಡಿದ ಚುನಾವಣಾ ಆಯೋಗಕ್ಕೆ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy