ತುರುವೇಕೆರೆ: ದ್ವಿಚಕ್ರ ವಾಹನಗಳೆರಡು ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಘಟನೆ ತುರುವೇಕೆರೆ ತಾಲೂಕಿನ ಕಸಬಾ ಹೋಬಳಿ ಲೋಕಮ್ಮನಹಳ್ಳಿ ಗೇಟ್ ಬಳಿ ನಡೆದಿದೆ.
ಅಪಘಾತದ ಪರಿಣಾಮ ಎರಡೂ ದ್ವಿಚಕ್ರ ವಾಹನಗಳ ಸವಾರರಿಗೂ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಸಾರ್ವಜನಿಕರ ಸಹಾಯದಿಂದ112 ಪೊಲೀಸ್ ವಾಹನದ ಸಿಬ್ಬಂದಿ ತುರುವೇಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಕರೆತಂದಿದ್ದು ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಶ್ರೀ ಆದಿಚುಂಚನಗಿರಿ ವೈದ್ಯಕೀಯ ಮಹಾ ವಿದ್ಯಾಲಯ ಸಂಶೋಧನಾ ಕೇಂದ್ರಕ್ಕೆ ಕಳಿಸಿದ್ದಾರೆ.
ಚಿಕ್ಕನಾಯಕನಹಳ್ಳಿ ಕಲ್ಪನಾ ಓಂ ವಿಜಯ್ (42) , ಚಂದನ್ ವಿಜಯ್ (18), ಇನ್ನೊಂದು ದ್ವಿಚಕ್ರವಾಹನ ಸವಾರ ತುರುವೇಕೆರೆ ತಾಲೂಕಿನ ದಂಡಿನ ಶಿವರ ಹೋಬಳಿಯ ಚಂದ್ರಶೇಖರ ಬಿನ್ ರಂಗಪ್ಪ ಅಪಘಾತದಲ್ಲಿ ಗಾಯಗೊಂಡವರು ಎಂದು ಗುರುತಿಸಲಾಗಿದೆ.
ತುರುವೇಕೆರೆ ಠಾಣೆಯ ಪೊಲೀಸರು ಘಟನೆ ಸಂಬಂಧಪ್ರಕರಣದ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಿದ್ದಾರೆ.
ವರದಿ: ಸುರೇಶ್ ಬಾಬು ಎಂ, ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1