ಪಾವಗಡ: ಉತ್ತರ ಪಿನಾಕಿನಿ ನದಿಗೆ ಬಿದ್ದು ಯುವಕನೋರ್ವ ಮೃತಪಟ್ಟ ದಾರುಣ ಘಟನೆ ಪಾವಗಡ ತಾಲೂಕಿನ ನಾಗಲಮಡಿಕೆಯಲ್ಲಿ ನಡೆದಿದೆ.
ನಾರಾಯಣ(29) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ನಾಗಲಮಡಿಕೆಯ ಸುಬ್ರಮಣ್ಯೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಷಷ್ಠಿ ಇದ್ದ ಹಿನ್ನೆಲೆ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು. ಡ್ಯಾಂ ಸಮೀಪದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು, ಇದರ ಮಧ್ಯೆ ನೀರಿನಲ್ಲಿ ಈ ಯುವಕ ಬಿದ್ದು ಸಾವನ್ನಪ್ಪಿದ್ದಾನೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಶೋಧ ನಡೆಸಿ, ಯುವಕನ ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ.
ಮೃತ ಯುವಕ ನಾರಾಯಣ ವಿವಾಹಿತನಾಗಿದ್ದು, ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ತಿರುಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ವರದಿ: ಮಲ್ಲಿಕಾರ್ಜುನ್, ನಾಗಲಮಡಿಕೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1