ತಿಪಟೂರು: ಕೆ.ಬಿ.ಕ್ರಾಸ್ ನಲ್ಲಿ ಜನವರಿ 29ರಂದು ಎರಡನೇ ‘ನಮ್ಮ ಆರೋಗ್ಯ ಕೇಂದ್ರ’ ಪ್ರಾರಂಭ ಮಾಡಲಾಗುವುದು ಎಂದು ಕಾಂಗ್ರೆಸ್ ಮುಖಂಡ ಸಿ.ಬಿ.ಶಶಿಧರ್ ತಿಳಿಸಿದರು.
ಹೆಣ್ಣು ಮಕ್ಕಳ ಶಿಕ್ಷಣ, ಆರ್ಥಿಕ ಸ್ಥಿತಿಗತಿ ಮತ್ತು ಪ್ರಮುಖವಾಗಿ ಹೆಣ್ಣು ಮಕ್ಕಳ ಆರೋಗ್ಯ ದೃಷ್ಟಿಯಿಂದ ಮತ್ತು ಗ್ರಾಮೀಣ ಭಾಗದ ಹೆಣ್ಣು ಮಕ್ಕಳ ಆರೋಗ್ಯ ಸಮಸ್ಯೆಗಳನ್ನು ಮುಕ್ತವಾಗಿ ವೈದ್ಯರೊಂದಿಗೆ ಹೇಳಿಕೊಂಡು ಸುಲಭವಾಗಿ ಪರಿಹಾರ ಕಂಡುಕೊಳ್ಳುವಲ್ಲಿ ಈ ಆರೋಗ್ಯ ಕೇಂದ್ರವನ್ನು ಗ್ರಾಮೀಣ ಭಾಗದ ಕೆ.ಬಿ. ಕ್ರಾಸ್ ನಲ್ಲಿ ತೆರೆಯಲಿದ್ದು, ಇಲ್ಲಿನ ಸುತ್ತಮುತ್ತ ಗ್ರಾಮೀಣ ಮಹಿಳೆಯರಿಗೆ ಅನುಕೂಲವಾಗಲಿದೆ ಎಂದು ಸಿ.ಬಿ.ಶಶಿಧರ ತಿಳಿಸಿದರು.
ಈ ಕಾರ್ಯಕ್ರಮಕ್ಕೆ ಗೋಡೆಕೆರೆ ಶ್ರೀ ಮೃತ್ಯುಂಜಯ ದೇಶಿಯ ಕೇಂದ್ರಸ್ವಾಮೀಜಿ ಚಾಲನೆ ನೀಡಲಿದ್ದು, ಡಾ. ಹೇಮಾ ದಿವಾಕರ್, ಡಾ.ಎಲ್.ದ್ವಾರಕನಾಥ್ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ವರದಿ: ಆನಂದ್, ತಿಪಟೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1