ಬೆಂಗಳೂರಿನ ಯಲಹಂಕ ವಾಯುನೆಲೆಯಲ್ಲಿ ‘ಏರೋ ಇಂಡಿಯಾ-2023’ ಪ್ರದರ್ಶನ ನಡೆಯಲಿರುವ ಹಿನ್ನೆಲೆ 22 ದಿನಗಳ ಕಾಲ ಮಾಂಸ ಮಾರಾಟಕ್ಕೆ BBMP ನಿಷೇಧ ವಿಧಿಸಿದೆ.
ಫೆಬ್ರುವರಿ 13 ರಿಂದ 17ರವರೆಗೆ ವೈಮಾನಿಕ ಪ್ರದರ್ಶನ ನಡೆಯಲಿದೆ. ಜನವರಿ 30ರಿಂದ ಫೆಬ್ರುವರಿ 20ರವರೆಗೆ ಯಲಹಂಕ ವಲಯದ ವ್ಯಾಪ್ತಿಯಲ್ಲಿ ಮಾಂಸ ಮಾರಾಟಕ್ಕೆ ಬ್ರೇಕ್ ಹಾಕಲಾಗಿದೆ. ಹೋಟೆಲ್, ರೆಸ್ಟೋರೆಂಟ್/ಡಾಬಾಗಳಲ್ಲಿ ಮಾಂಸಾಹಾರ ತಯಾರಿಕೆ & ಮಾರಾಟವನ್ನೂ ನಿಷೇಧಿಸಿದೆ. ಆದೇಶ ಉಲ್ಲಂಘಿಸಿದರೆ ಕ್ರಮ ಜರುಗಿಸುವುದಾಗಿ BBMP ಎಚ್ಚರಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy