ತುರುವೇಕೆರೆ: ತಾಲೂಕಿನ ದಬ್ಬೆಘಟ್ಟ ಹೋಬಳಿ ಅರೇಮಲ್ಲೇನಹಳ್ಳಿಯಲ್ಲಿರುವ. ಕಿತ್ತೂರುರಾಣಿ ವಸತಿ ಶಾಲೆಯ ಕ್ರೀಡಾಂಗಣದಲ್ಲಿ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಸಲಾಯಿತು.
ಧ್ವಜಾರೋಹಣವನ್ನು ಜಮ್ಮು ಮತ್ತು ಕಾಶ್ಮೀರ ವಲಯದ ಮಾಜಿ ಯೋಧ ಯೋಗಾನಂದ ಸ್ವಾಮಿ ನೆರವೇರಿಸಿದರು. ಧ್ವಜಾರೋಹಣವಾದ ನಂತರ ಶಾಲಾ ಮಕ್ಕಳಿಂದ ಪಥಸಂಚಲನ ನಡೆಸಲಾಯಿತು. ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರೋ ಬ್ರಿಕ್ಸ್ ಸಹ ಆಯೋಜಿಸಲಾಗಿತ್ತು.
ಇನ್ನು ಈ ಕಾರ್ಯಕ್ರಮದಲ್ಲಿ ಅರೆ ಮಲ್ಲೇನಹಳ್ಳಿಯ ವಸತಿ ಶಾಲೆಯ ಪ್ರಾಂಶುಪಾಲರಾದ ಪರಣ್ಣ ಮಣೆ ಚೆಂಡೂರು ವಸತಿ ಶಾಲೆಯ ಗದಗಯ್ಯ ಹಿರೇಮಠ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು ಈ ಕಾರ್ಯಕ್ರಮದಲ್ಲಿ ಎರಡೂ ಶಾಲೆಯ ಶಿಕ್ಷಕ ವೃಂದ ಹಾಗೂ ಮಕ್ಕಳು ಹಾಜರಿದ್ದರು.
ವರದಿ: ಸುರೇಶ್ ಬಾಬು ಎಂ., ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1