ಒಂದು ವರ್ಷದ ಮಗುವನ್ನುಅಪಹರಿಸಿ ಹಣದ ಡಿಮ್ಯಾಂಡ್ ಮಾಡಿ, ಬಳಿಕ 1 ಲಕ್ಷ ರೂ.ಗೆ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದಲ್ಲಿ ನಡೆದಿದ್ದು, ಇದೀಗ ಮಗುವನ್ನು ರಕ್ಷಿಸಿರುವ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ.
ಡಿಸೆಂಬರ್ 26 ರಂದು ನಗರದ ಕಾಮತ್‌ಘರ್ ಪ್ರದೇಶದಿಂದ ಮಗುವನ್ನು ಅಪಹರಿಸಿದ್ದ ಇಬ್ಬರು ಮಹಿಳೆಯರು ಮತ್ತು ಒಬ್ಬ ಪುರುಷನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ನಡೆಸಿದ ತನಿಖೆಯಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಅಲ್ಲದೇ ಮಗುವನ್ನು ಮಾರಾಟ ಮಾಡಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ.
ಮಗುವನ್ನು ರಕ್ಷಿಸಿ ಪೋಷಕರಿಗೆ ಒಪ್ಪಿಸಲಾಗಿದೆ. ಆರೋಪಿಗಳ ವಿರುದ್ಧ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy