ಹಂದಿಕುಟೆ ಅಗ್ರಹಾರ ಕೆರೆಯಲ್ಲಿ ಮುಳುಗುತ್ತಿದ್ದ ಹೆಣ್ಣುಮಕ್ಕಳನ್ನು ರಕ್ಷಿಸಿ ಜೀವ ಉಳಿಸಿದ್ದ ಶಿರಾ ಕೆ.ಎಸ್.ಆರ್.ಟಿ.ಸಿ ನೌಕರ ಮಂಜುನಾಥ್ ಅವರನ್ನು ಶಿರಾ ತಹಶೀಲ್ದಾರ್ ಮಮತಾ ಎಂ. ಅವರು ಸನ್ಮಾನಿಸಿ ಗೌರವಿಸಿದರು.
ಹಂದಿಕುಂಟೆ ಅಗ್ರಹಾರ ಕೆರೆ ಬಳಿಗೆ ತಾಯಿಯೊಂದಿಗೆ ಬಟ್ಟೆ ತೊಳೆಯಲು ಹೋಗಿದ್ದ ಇಬ್ಬರು ಮಕ್ಕಳು ಆಕಸ್ಮಿಕವಾಗಿ ನೀರಿಗೆ ಬಿದ್ದಿದ್ದರು. ಇದೇ ವೇಳೆ ಈ ರಸ್ತೆಯಲ್ಲಿ ಬಸ್ ಚಲಾಯಿಸಿಕೊಂಡು ಬರುತ್ತಿದ್ದ ಸರ್ಕಾರಿ ಬಸ್ ಚಾಲಕ ಮಂಜುನಾಥ್ ಅವರು ಬಸ್ ನಿಲ್ಲಿಸಿ, ತಮ್ಮ ಪ್ರಾಣದ ಹಂಗು ತೊರೆದು ಕೆರೆಗೆ ಹಾರಿ ಇಬ್ಬರು ಬಾಲಕಿಯರನ್ನೂ ರಕ್ಷಿಸಿದ್ದರು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ಮಮತಾ ಎಂ. ಅವರು ಸನ್ಮಾನಿಸಿದ್ದಾರೆ.
ಇದೇ ವೇಳೆ ಬರಗೂರು ಶಾಲೆಯ ವಿದ್ಯಾರ್ಥಿ ಆರ್.ಸಿ. ಗೌಡ ಕಛೇರಿಯಲ್ಲಿ ಸನ್ಮಾನಿಸಿ ವೈಯಕ್ತಿಕವಾಗಿ 5000/- ರೂಗಳನ್ನು ಬಹುಮಾನವಾಗಿ ನೀಡಿದರು.
ವರದಿ: ಮಾರನಹಳ್ಳಿ ಗಣೇಶ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1