ಪೋಪ್ ಫ್ರಾನ್ಸಿಸ್ ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಸೂಡಾನ್ ಪ್ರವಾಸ ಮುಗಿಸಿ ರೋಮ್‌ಗೆ ವಾಪಸಾಗುತ್ತಿದ್ದ ವೇಳೆ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಉತ್ತರಿಸಿದ ಅವರು ಮುಂದಿನ ವರ್ಷ ಭಾರತಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆ.
ಕೇರಳ ಮತ್ತು ಗೋವಾ ಪರಿಗಣನೆಯಲ್ಲಿದೆ. ಅಂತಿಮ ಮಾತುಕತೆ ಪ್ರಗತಿಯಲ್ಲಿದೆ. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ಪೋಪ್ ಅವರನ್ನು ಭಾರತಕ್ಕೆ ಆಹ್ವಾನಿಸಿದ್ದರು. ಪೋಪ್ ಫ್ರಾನ್ಸಿಸ್ ಆಹ್ವಾನವನ್ನು ಸ್ವೀಕರಿಸಿದರು. ಎರಡು ದಶಕಗಳ ನಂತರ ಪೋಪ್ ಒಬ್ಬರು ಭಾರತಕ್ಕೆ ಬರುತ್ತಿದ್ದಾರೆ. ಪೋಪ್ ಜಾನ್ ಪಾಲ್ II 1999 ರಲ್ಲಿ ಭಾರತಕ್ಕೆ ಕೊನೆಯ ಬಾರಿಗೆ ಭೇಟಿ ನೀಡಿದ್ದರು.
ಅವರು ಸೆಪ್ಟೆಂಬರ್‌ನಲ್ಲಿ ಫ್ರಾನ್ಸ್‌ನ ಮಾರ್ಸಿಲ್ಲೆಯಲ್ಲಿ ಬಿಷಪ್‌ಗಳ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಪೋಪ್ ಫ್ರಾನ್ಸಿಸ್ ಅವರು ಮಂಗೋಲಿಯಾಕ್ಕೆ ಭೇಟಿ ನೀಡಿದರೆ ಭೇಟಿ ನೀಡಿದ ಮೊದಲ ಪೋಪ್ ಆಗಲಿದ್ದಾರೆ.
ವರದಿ : ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy