ತುಮಕೂರು: ಶ್ರೀ ಸಿದ್ಧಗಂಗಾಮಠದಲ್ಲಿ ಇಂದು(ಫೆ.8) ಸಂಜೆ 7 ಗಂಟೆಯಿಂದ ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ—2023 ಆರಂಭವಾಗಲಿದ್ದು, ಇಂದು ಸಂಜೆ ವಸ್ತು ಪ್ರದರ್ಶನ ಉದ್ಘಾಟನಾ ಸಮಾರಂಭ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಸಮಾರಂಭದಲ್ಲಿ ಶ್ರೀಶ್ರೀ ಸಿದ್ದಲಿಂಗ ಮಹಾಸ್ವಾಮಿ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ತುಮಕೂರು ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆ ವಹಿಸಲಿದ್ದಾರೆ.
ತುಮಕೂರು ಮಹಾನಗರ ಪಾಲಿಕೆ ಮೇಯರ್ ಎಂ.ಪ್ರಭಾವತಿ ಸುಧೀಶ್ವರ್ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ತುಮಕೂರು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಸಿಇಒ ಡಾ.ಕೆ.ವಿದ್ಯಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರ್ ವಾಡ್, ಮಹಾನಗರ ಪಾಲಿಕೆ ಆಯುಕ್ತರಾದ ಸಿ.ಯೋಗಾನಂದ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಕೆ.ಎಂ.ಉಮೇಶ್ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1