ತುರುವೇಕೆರೆ: ತಾಲೂಕಿನ ಬಾಣಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎ.ಹೊಸಹಳ್ಳಿ ಗ್ರಾಮದಲ್ಲಿ ಜೈ ಮಾರುತಿ ವಾಲಿಬಾಲ್ ಕ್ಲಬ್ ವತಿಯಿಂದ ಎರಡನೇ ವರ್ಷದ ರಾಜ್ಯಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಫೆಬ್ರವರಿ 18ರಂದು ಹಮ್ಮಿಕೊಳ್ಳಲಾಗಿದೆ ಎಂದು ನಿವೃತ್ತ ಶಿಕ್ಷಕ ಕೆ ಶಿವಣ್ಣ ತಿಳಿಸಿದರು.
ತಾಲೂಕಿನ ಎ ಹೊಸಹಳ್ಳಿಯ ಮಾರುತಿ ಮಾರುತಿ ದೇವಾಲಯದ ಆವರಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರುತಿ ದೇವಾಲಯದ ಮುಂಭಾಗ ಶನಿವಾರ ಸಂಜೆ 6 ಗಂಟೆಗೆ ಪಂದ್ಯಾವಳಿ ಪ್ರಾರಂಭವಾಗಲಿದೆ. ಪ್ರಥಮ ಬಹುಮಾನ 30,000 ನಗದು, ದ್ವಿತೀಯ ಬಹುಮಾನ 20,000 ನಗದು ತೃತಿಯ 10,000 ನಗದು ಚತುರ್ಥ ಬಹುಮಾನ 5000 ಬಹುಮಾನವಿದೆ ಎಂದು ತಿಳಿಸಿದರು.
ಈ ಪಂದ್ಯಾವಳಿಗೂ ಮುನ್ನ ವೇದಿಕೆ ಕಾರ್ಯಕ್ರಮವಿದ್ದು, ಅದರಲ್ಲಿ ಅಧ್ಯಕ್ಷತೆಯನ್ನ ಮಾಜಿ ಶಾಸಕ ಎಂ.ಟಿ.ಕೃಷ್ಣಪ್ಪ ಗ್ರಾಮದ ಹಿರಿಯ ಮುಖಂಡ ಶಿವಣ್ಣ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜೆಡಿಎಸ್ ತಾಲೂಕು ಯುವ ಘಟಕದ ಅಧ್ಯಕ್ಷ ಬಾಣಸಂದ್ರ ರಮೇಶ್ ಜನಪ್ರತಿನಿಧಿಗಳು ಊರಿನ ಮುಖಂಡರು ಭಾಗವಹಿಸಲಿದ್ದಾರೆ .
ಸ್ಪರ್ಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಕುಡಿಯುವ ನೀರು ಮತ್ತು ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಯಾವುದೇ ತಂಡ ಫೆಬ್ರವರಿ 18ರ ಏಳು ಗಂಟೆಯ ಒಳಗೆ ತಮ್ಮ ಹೆಸರುಗಳನ್ನ ನೋಂದಾಯಿಸಿಕೊಳ್ಳಬೇಕು ಹೆಚ್ಚಿನ ಮಾಹಿತಿಗಾಗಿ 63 61 19 46 57 ಮತ್ತು 99 0 0 3 0 0 0 9 1 ಸಂಪರ್ಕಿಸಲು ಕೋರಿದೆ ಎಂದರು.
ಈ ಸುದ್ದಿಗೋಷ್ಠಿಯಲ್ಲಿ ಕ್ಲಬ್ ನ ಸದಸ್ಯರಾದ ರಾಘು ಶಿವು ಗೋವಿಂದರಾಜು ಮಂಜು, ಪುನೀತ ಶಿವರಾಮ್ ಮತ್ತು ಗ್ರಾಮದ ಕೆಲ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.
ವರದಿ: ಸುರೇಶ್ ಬಾಬು ಎಂ., ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1