ಸರಗೂರು: ಜೀತದಾಳುಗಳನ್ನು ಗುರುತಿಸಿ ಅವರಿಗೆ ಪುನರ್ ವಸತಿ ಹಾಗೂ ಸರಕಾರದ ಇತರ ಸೌಲಭ್ಯ ಒದಗಿಸುವ ಮೂಲಕ ಮುಖ್ಯವಾಹಿನಿಗೆ ತರುವ ಜವಾಬ್ದಾರಿ ನಮ್ಮೆಲ್ಲರದ್ದಾಗಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸುಷ್ಮಾ ಹೇಳಿದರು.
ತಾಲೂಕಿನ ಬಿ ಮಟಕೆರಿ ಗ್ರಾಪಂಯ ವಿ ಎಸ್ ಎಸ್ ಎನ್ ಸಮುದಾಯ ಭವನದಲ್ಲಿ ಗುರುವಾರ ಜೀತ ಪದ್ಧತಿ ನಿರ್ಮೂಲನೆ ದಿನಾಚರಣೆಯನ್ನು ತಾಲ್ಲೂಕು ಆಡಳಿತ ಮತ್ತು ತಾಲೂಕು ಪಂಚಾಯಿತಿ ಮತ್ತು ಸರಕಾರದ ವಿವಿಧ ಇಲಾಖೆಗಳ ಆಶ್ರಯದಲ್ಲಿ ಆಯೋಜಿಸಿದ್ದ ಜೀತ ಪದ್ಧತಿಯ ನಿರ್ಮೂಲನೆ ಮತ್ತು ಹೇಗೆ ಗುರುತಿಸುವುದು ಕುರಿತು ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಹಾಗೂ ಉದ್ಘಾಟಿಸಿ ಮಾತನಾಡಿದರು.
ಕನಿಷ್ಠ ಕೂಲಿ ಇಲ್ಲದೆ ಜೀತದಾಳುಗಳು ಮತ್ತು ಅವರ ಕುಟುಂಬಗಳು ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುತ್ತವೆ. ಆದರೆ ಅವರಿಗೆ ಶಿಕ್ಷಣದ ಕೊರತೆಯಿಂದ ಜೀತದಿಂದ ಹೊರಬಂದು ಸರಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುವುದಿಲ್ಲ. ಹೀಗಾಗಿ ಇಂಥ ಪ್ರಕರಣಗಳನ್ನು ಗುರುತಿಸಿ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿದಲ್ಲಿ ಸರಕಾರದ ಸೌಲಭ್ಯ ಕಲ್ಪಿಸುವ ಮೂಲಕ ಜೀತ ಮುಕ್ತಗೊಳಿಸಬಹುದು. ಅನೇಕ ಸಾಮಾಜಿಕ ಅನಿಷ್ಠಗಳಂತೆ ಜೀತ ಪದ್ಧತಿಯೂ ಅನಿಷ್ಠ ಪದ್ಧತಿ. ಇದನ್ನು ಹೋಗಲಾಡಿಸುವ ಜವಾಬ್ದಾರಿ ಸಮಾಜದ ಪ್ರತಿಯೊಬ್ಬರ ಮೇಲಿದೆ ಎಂದು ಹೇಳಿದರು.
ಜಿವಿಕಾ ತಾಲ್ಲೂಕು ಸಂಚಾಲಕ ಚಂದ್ರಶೇಖರ ಮೂರ್ತಿ ಸಂಚಾಲಕ ಚಂದ್ರಶೇಖರ ಮೂರ್ತಿ ಮಾತನಾಡಿ, ಈ ಅನಿಷ್ಠ ಪದ್ಧತಿ ನಿರ್ಮೂಲನೆಯ ಉದ್ದೇಶಕ್ಕಾಗಿ 1993 ರಲ್ಲಿ ಸರಕಾರೇತರ ಸಂಸ್ಥೆ ಆರಂಭಿಸಲಾಗಿದ್ದು, ಈ ಸಂಸ್ಥೆಯಲ್ಲಿ 650 ಕ್ಕೂ ಹೆಚ್ಚು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯಕರ್ತರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೋಟೆ ಮತ್ತು ಸರಗೂರು ತಾಲ್ಲೂಕಿನಲ್ಲಿ ಈವರೆಗೆ ಒಟ್ಟು 560 ಜನರನ್ನು ಜೀತದಾಳುಗಳನ್ನು ಗುರುತಿಸಿ ಅವರನ್ನು ಜೀತದಿಂದ ವಿಮುಕ್ತಿಗೊಳಿಸಿದ್ದಿವಿ ಎಂದರು.
ಸಂವಿಧಾನ ಸಂರಕ್ಷಣಾ ಸಮಿತಿ ಪ್ರಧಾನ ಕಾರ್ಯದರ್ಶಿ ಮತ್ತು ಗ್ರಾಪಂ ಕುರ್ಣೆಗಾಲ ಬೆಟ್ಞಸ್ವಾಮಿ ಮಾತನಾಡಿ, ಕರ್ನಾಟಕದಲ್ಲಿ ಜೀತ ಪ್ರಕರಣಗಳು ಸಾಕಷ್ಟಿದ್ದರೂ ಪ್ರಕರಣಗಳು ಮಾತ್ರ ಬೆಳಕಿಗೆ ಬರುತ್ತಿಲ್ಲ. ಈ ಕಾರಣದಿಂದಲೇ ಗ್ರಾಮೀಣ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಂದಾಯ ಇಲಾಖೆ, ಪಂಚಾಯತ್ ರಾಜ ಇಲಾಖೆ, ಸಮಾಜ ಕಲ್ಯಾಣ ಮತ್ತು ಮಹಿಳಾ ಮತ್ತು ಕಲ್ಯಾಣ ಇಲಾಖೆಗಳ ನೌಕರರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಹೇಳಿದರು.
,ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಶಿವಣ್ಣ, ಜಿವಿಕಾ ಮಹೇಶ್, ಗ್ರಾಪಂ ಅಧ್ಯಕ್ಷೆ ರೂಪಾಬಾಯಿ, ಗ್ರಾಪಂ ಉಪಾಧ್ಯಕ್ಷ ದೇವದಾಸ್, ಗ್ರೇಟ್ 2 ತಹಸೀಲ್ದಾರ್ ಪರಶಿವಮೂರ್ತಿ, ಪರಿಶಿಷ್ಟ ಪಂಗಡ ಇಲಾಖೆ ಅಧಿಕಾರಿ ನಾರಾಯಣಸ್ವಾಮಿ,ಗೋಪಾಲಕೃಷ್ಣ ಮೂರ್ತಿ, ತೋಟಗಾರಿಕೆ ಇಲಾಖೆ ಅಧಿಕಾರಿ ಗೋವಿಂದರಾಜು, ರಾಣಿಬಾಯಿ, ಕಾಳಸ್ವಾಮಿ, ತಾಲ್ಲೂಕು ಪಂಚಾಯಿತಿ ಸಂಯೋಜಕ ಮಹದೇವಸ್ವಾಮಿ, ದಸಂಸ ತಾಲ್ಲೂಕು ಸಂಚಾಲಕ ಗೋವಿಂದರಾಜು, ಮಹೇಶ್ ಎಲ್ಲಾ ಗ್ರಾಪಂ ಪಿಡಿಒ ಅಧಿಕಾರಿಗಳು ಭಾಗ್ಯ, ಹನುಮಯ್ಯ, ನಾಗೇಂದ್ರ, ಚೆನ್ನಪ್ಪ,ಸರಿತಾ, ಮಹೇಶ್, ಪ್ರಸನ್ನ, ಮಲ್ಲರಾಜು, ಅರುಣ್, ಚಂದ್ರ, ಕಾಂತರಾಜು, ಅಭಿಲಾಷ್, ವಾಲ್ಮೀಕಿ ನಿಗಮ ಇಲಾಖೆ ಅಧಿಕಾರಿ ಪರಮೇಶ್ವರಪ್ಪ ಎಲ್ಲಾ ಗ್ರಾಪಂ ನೌಕರರು ಕಾರ್ಯಕ್ರಮದಲ್ಲಿ ಮುಖಂಡರು ಹಾಜರಿದ್ದರು.
ವರದಿ: ಚಂದ್ರ ಹಾದನೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1