ಮೈಸೂರು: ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಸ್ಪರ್ಧಿಸುತ್ತಾರೆ ಎಂಬ ಚರ್ಚೆಗಳ ಬೆನ್ನಲ್ಲೆ ಅವರ ಪುತ್ರ ಡಾ.ಯತಿಂದ್ರ ವರುಣಾ ಕ್ಷೇತ್ರದಲ್ಲಿ ಸಂಚಾರ ನಡೆಸುತ್ತಿದ್ದು ಅಲ್ಲಿಂದ ಸ್ಪರ್ಧೆಗಿಳಿಯುವುದಾಗಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾದ್ಯಮಗಳೊಂದಿಗೆ ಮಾತನಾಡಿದ ಅವರು ನನ್ನ ತಂದೆ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಹೇಳಿದ್ದು ಕಾಂಗ್ರೆಸ್ ಭದ್ರಕೋಟೆಯಾದ ವರುಣಾ ಕ್ಷೇತ್ರದಲ್ಲಿ ನಾನೇ ಸ್ಪರ್ಧಿಸಲಿದ್ದೇನೆ ಎಂದಿದ್ದಾರೆ.
ಡಾ. ಯತೀಂದ್ರ ಸಿದ್ದರಾಮಯ್ಯ ವರುಣ ಕ್ಷೇತ್ರದಲ್ಲಿ ಚುರುಕಿನಿಂದ ಸುತ್ತಾಟ ನಡೆಸುತ್ತಿದ್ದು ಬೈಕ್ನಲ್ಲಿ ಸಂಚಾರ ನಡೆಸಿ ಗ್ರಾಮಗಳ ಮನೆ ಮನೆಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸುತ್ತಿದ್ದಾರೆ. ಬಿಜೆಪಿಯಿಂದ ಯಾರೇ ಸ್ಪರ್ಧಿಸಿದರು ಅಂತಿಮವಾಗಿ ವರುಣಾದಲ್ಲಿ ನಾವೇ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy