ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರ ಈ ಭಾರಿಯ ಕೊನೆಯ ಬಜೆಟ್ ಮಂಡನೆ ಮಾಡಲಿದ್ದು ಪೆ.10 ರಿಂದ ಅಧಿವೇಶನ ನಡೆಯಲಿದೆ. ಇದು ಕೊನೆಯ ಅಧಿವೇಶನವಾಗಿದ್ದು ಎಲ್ಲ ಶಾಸಕರುಗಳು ಇದರಲ್ಲಿ ಕಡ್ಡಾಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸ್ಪೀಕರ್ ಕಾಗೇರಿ ಅವರು ಮನವಿ ಮಾಡಿದ್ದಾರೆ.
ಬೆಳಗಾವಿಯಲ್ಲಿ ಕಳೆದ ಅಧಿವೇಶನ ನಡೆದಿತ್ತು. ಅದಾದ ಬಳಿಕ ಈಗ ವಿಧಾನಸೌಧದಲ್ಲಿ ಸೇರುತ್ತಿದ್ದೇವೆ. ಪ್ರಜಾಪ್ರಭುತ್ವದ ದೇಗುಲ ಎಂದು ಕರೆಯಲಾಗುವ ಸದನ ಇದು. ಈ ವಿಧಾನಸಭೆಯ 15ನೆಯ ಅಧಿವೇಶನವಾಗಿದ್ದು ಸದಸ್ಯರು ಜವಾಬ್ದಾರಿಯುತವಾಗಿ ನಡೆದುಕೊಂಡು ಅಧಿವೇಶದಲ್ಲಿ ಪಾಲ್ಗೊಳ್ಳಬೇಕೆಂದು ಬಯಸುವುದಾಗಿ ಹೇಳಿದರು.
ಫೆ. 10 ರಿಂದ ಫೆ. 24ರವರೆಗೆ ನಡೆಯಲಿರುವ ಬಜೆಟ್ ಅಧಿವೇಶನವಾಗಿದ್ದು ಫೆಬ್ರುವರಿ 17ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಬಜೆಟ್ ಮಂಡಿಸಲಿದ್ದಾರೆ. ನಾಳೆ 11 ಗಂಟೆಗೆ ರಾಜ್ಯಪಾಲರು ಬೃಹತ್ ಮೆಟ್ಟಿಲುಗಳ ಮೂಲಕ ವಿಧಾನಸಭೆಗೆ ಆಗಿಸಲಿದ್ದು, ಜಂಟಿ ಅಧಿವೇಶನವನ್ನು ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy