ಶಿವಮೊಗ್ಗ: ಕೇವಲ 18 ತಿಂಗಳುಗಳಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಸಿದ್ಧವಾಗಿ ನಿಂತಿದ್ದು ಇದೀಗ ಅದಕ್ಕೆ ಹೆಸರೇನಿಡಬೇಕು ಎಂಬುವುದೇ ಭಾರಿ ಚರ್ಚೆಯಲ್ಲಿದ್ದು ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನು ಇಡಲು ನಿರ್ಧರಿಸಲಾಗಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರನ್ನು ಇಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೇಂದ್ರ ಸರ್ಕಾರಕ್ಕೆ ಈ ಕುರಿತು ಪ್ರಸ್ತಾವನೆ ಕಳಿಸುತ್ತೇವೆ. ಸಚಿವ ಸಂಪುಟದಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಆದರೆ, ಯಡಿಯೂರಪ್ಪ ಅವರು ಅದಕ್ಕೆ ತಡೆಯೊಡ್ಡಿದ್ದರು. ಆದರೂ ಸಹ ಜನರ ಪ್ರೀತಿಗೆ ಬಗ್ಗಲೇಬೇಕು. 2006 ಮತ್ತು ಈಗಿನ ಸಂದರ್ಭದಲ್ಲಿ ಶಿವಮೊಗ್ಗಕ್ಕೆ ಅಜಗಜಾಂತರ ವ್ಯತ್ಯಾಸವಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy