ತುರುವೇಕೆರೆ: ಪಟ್ಟಣದ ಮಹೇಂದ್ರ ರಸ್ತೆಯಲ್ಲಿರುವ ಪೊಲೀಸ್ ವೃತ ನಿರೀಕ್ಷಕರ ಕಚೇರಿಯದುರಿನ ಕಾರು ಚಾಲಕರ ಮತ್ತು ಮಾಲೀಕರ ಸಂಘವು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮ ದಿನವನ್ನು ಆಚರಿಸಿತು.
ತುರುವೇಕೆರೆ ವೃತ್ತದ ಪೊಲೀಸ್ ನಿರೀಕ್ಷಕರಾದ ಗೋಪಾಲ್ ನಾಯಕ್ ರವರು ಕೆಕ್ ಕತ್ತರಿಸುವ ಮೂಲಕ ಅಪ್ಪು ಹುಟ್ಟುಕ್ಕೆ ಚಾಲನೆ ನೀಡಿದರು. ಇದೇ ವೇಳೆ ಸಂಘದ ಆಟೋ ಚಾಲಕರು ಮತ್ತು ಮಾಲೀಕರ ಕಾರ್ಯವನ್ನುಶ್ಲಾಘಿಸಿ ಶುಭಾಶಯ ಕೋರಿದರು.
ಇದೇ ಸಂದರ್ಭದಲ್ಲಿ ಸಾರ್ವಜನಿಕರಿಗೆ ನಾಯಕ್ ರವರು ಬಿರಿಯಾನಿ ಬಡಿಸಿದರು. ಈ ಸಂದರ್ಭದಲ್ಲಿ ನೂರಾರು ಪುನೀತ್ ರಾಜಕುಮಾರ್ ಅಭಿಮಾನಿಗಳು ಆಟೋ ಚಾಲಕರು ಮತ್ತು ಮಾಲೀಕರುಗಳು ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA