ಬೆಳಗಾವಿಯಲ್ಲಿ ಸೋಮವಾರ ಯುವಕ್ರಾಂತಿ ಸಮಾವೇಶದಲ್ಲಿ ಅವರು ಮಾತನಾಡುತ್ತಿದ್ದರು. ಬಿಜೆಪಿ ಸರಕಾರ 40 ಪರ್ಸೆಂಟ್ ಸರಕಾರ. ಈ ಸರಕಾರದಿಂದ ಜನರು ಬೇಸತ್ತಿದ್ದಾರೆ. ಯಾವುದರಲ್ಲಿ ನೋಡಿದರೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿದರು.
ಕರ್ನಾಟಕದ ಸರಕಾರ ಭ್ರಷ್ಟ ಸರಕಾರ, 40 ಪರ್ಸೆಂಟ್ ಸರಕಾರ ಎಂದು ಇಲ್ಲಿನ ಗುತ್ತಿಗೆದಾರರು ಹೇಳಿದ್ದಾರೆ. ಕರ್ನಾಟಕದ ಯಾವುದೇ ಯುವಕರನ್ನು ಕೇಳಿದರೂ ಹೇಳುತ್ತಾರೆ. ಪಿಎಸ್ಐ ಹುದ್ದೆಯಲ್ಲಿ ಭ್ರಷ್ಟಾಚಾರ, ಉಪನ್ಯಾಸಕರ ಹುದ್ದೆಯಲ್ಲಿ ಭ್ರಷ್ಟಾಚಾರ, ಮೈಸೂರು ಸ್ಯಾಂಡಲ್ ನಲ್ಲಿ ಶಾಸಕರ ಮಗನ ಬಳಿಯೆ 8 ಕೋಟಿ ರೂ. ಸಿಕ್ಕಿತು. ಯಾವುದರಲ್ಲಿ ನೋಡಿದರೂ ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ. ಜನಸಾಮಾನ್ಯರ ಸರಕಾರವನ್ನು ಕರ್ನಾಟಕದ ಜನರು ಬಯಸಿದ್ದಾರೆ. ಹಾಗಾಗಿ ಈ ಬಾರಿ ಸ್ಪಷ್ಟ ಬಹುಮತದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಈ ವೇಳೆ ಮಾತನಾಡಿ, ವೇದಿಕೆಯ ಮೇಲಿರುವ ನಮ್ಮ ಪಕ್ಷದ ನಾಯಕರ ವಿಶ್ವಾಸ ನೋಡಿ ನನಗೆ ಖುಷಿಯಾಗುತ್ತಿದೆ. ಬೆಳಗಾವಿಯ 18ಕ್ಕೆ 18 ಸ್ಥಾನಗಳನ್ನೂ ಕಾಂಗ್ರೆಸ್ ಗೆಲ್ಲಬೇಕು. ಅದೇನೂ ಕಷ್ಟದ ವಿಚಾರವಲ್ಲ. ಈ ಸರಕಾರ ಭ್ರಷ್ಟಾಚಾರದಿಂದ ತುಂಬಿಹೋಗಿದೆ. ಗುತ್ತಿಗೆದಾರರೇ ಈ ಕುರಿತು ಮಾಹಿತಿ ನೀಡಿದ್ದಾರೆ. ಆದರೆ ಅಮಿತ್ ಶಾ ಈ ಬಗ್ಗೆ ತನಿಖೆ ಮಾಡಿಸಲು ಸಿದ್ಧರಿಲ್ಲ ಎಂದರು.
ನನ್ನ ರಿಮೋಟ್ ಕಂಟ್ರೋಲ್ ಸೋನಿಯಾ ಗಾಂಧಿ ಬಳಿ ಇದೆ ಎನ್ನುತ್ತಾರೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ರಿಮೋಟ್ ಯಾರ ಬಳಿ ಇದೆ ಎಂದು ಖರ್ಗೆ ಪ್ರಶ್ನಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA