ಬೆಳಗಾವಿ: ಪದವಿ ಓದಿದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3 ಸಾವಿರ ರೂ. ಭತ್ಯೆ ನೀಡುವುದಾಗಿ ಕಾಂಗ್ರೆಸ್ ಘೋಷಿಸಿದೆ.
ಬೆಳಗಾವಿಯಲ್ಲಿ ನಡೆಯುತ್ತಿರುವ ಯುವಕ್ರಾಂತಿ ಸಮಾವೇಶದಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ನ 4ನೇ ಗ್ಯಾರಂಟಿಯನ್ನು ಘೋಷಿಸಿದರು.
ಮುಂದೆ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ತಿಂಗಳು ಪದವಿ ಓದಿದವರಿಗೆ ನಿರುದ್ಯೋಗ ಭತ್ಯೆಯಾಗಿ 3 ಸಾವಿರ ರೂ., ಡಿಪ್ಲೋಮಾ ಓದಿದವರಿಗೆ 1,500 ರೂ. ನೀಡಲಾಗುವುದು ಎಂದು ಕಾಂಗ್ರೆಸ್ ʼಯುವ ನಿಧಿʼ ಯೋಜನೆಯನ್ನು ಘೋಷಣೆ ಮಾಡಿದೆ.
ಈಗಾಗಲೇ ಕಾಂಗ್ರೆಸ್ ಮೂರು ಗ್ಯಾರಂಟಿಯನ್ನು ಘೋಷಣೆ ಮಾಡಿದೆ. ಪ್ರತಿ ತಿಂಗಳು ಕುಟುಂಬಕ್ಕೆ 10 ಕೆಜಿ ಅಕ್ಕಿ ಉಚಿತ, 200 ಯೂನಿಟ್ ವಿದ್ಯುತ್ ಉಚಿತ, ಕುಟುಂಬದ ಓರ್ವ ಮಹಿಳೆಗೆ 2 ಸಾವಿರ ರೂ. ನೀಡಲಾಗುವುದು ಎಂದು ಕಾಂಗ್ರೆಸ್ ಈಗಾಗಲೇ ಘೋಷಣೆ ಮಾಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA