ಕಾಂಗ್ರೆಸ್ ನವರದ್ದು ಗ್ಯಾರಂಟಿ ಕಾರ್ಡ್ ಅಲ್ಲ.ಅದು ಡ್ಯುಪ್ಲಿಕೆಟ್ ಕಾರ್ಡ್. ನಮ್ಮ ಪಂಚರತ್ನ ಯೋಜನೆಯನ್ನು ರಾಜ್ಯದ ಜನರು ಸ್ವೀಕರಿಸಿದ್ದಾರೆ. ಪಂಚರತ್ನದ ಯೋಜನೆ ಮೂಲಕ ರಾಜ್ಯದಲ್ಲಿ ರಾಮರಾಜ್ಯ ಪ್ರಾರಂಭವಾಗುವ ವಿಶ್ಲೇಷಣೆ ಶುರುವಾಗಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
ಮಾರ್ಚ್ 26ರಂದು ಮೈಸೂರಿನಲ್ಲಿ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭ ಹಿನ್ನಲೆ. ಮೈಸೂರಿನ ಉತ್ತನಹಳ್ಳಿ ಹಳ್ಳಿ ಸಮೀಪ ಭರದಿಂದ ಸಾಗಿದ ಬೃಹತ್ ವೇದಿಕೆ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು ಮಾಜಿ ಸಿಎಂ ಕುಮಾರಸ್ವಾಮಿ ಭೇಟಿ ನೀಡಿ ವೀಕ್ಷಣೆ ಮಾಡಿದರು. ಮಾಜಿ ಸಿಎಂ ಹೆಚ್ ಡಿಕೆಗೆ ಶಾಸಕರಾದ ಜಿ ಟಿ ದೇವೇಗೌಡ, ಸಾರಾ ಮಹೇಶ್, ಅಶ್ವಿನ್ ಕುಮಾರ್, ವಿಧಾನಪರಿಷತ್ ಸದಸ್ಯ ಮಂಜೇಗೌಡ ಸಾಥ್ ನೀಡಿದರು.
ಬಳಿಕ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ. ತಾಯಿ ಚಾಮುಂಡೇಶ್ವರಿ ಎಲ್ಲರಿಗೂ ಆಶೀರ್ವಾದ ಮಾಡಲಿ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭ ನಡೆಯುತ್ತದೆ. ಸುಮಾರು 100 ಎಕರೆಯಲ್ಲಿ ಒಂದು ಐತಿಹಾಸಿಕ ಕಾರ್ಯಕ್ರಮ ಮಾಡಲು ಸಿದ್ಧತೆ ನಡೆದಿದೆ. ಈ ಒಂದು ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಣೆ ಮಾಡಲಿಕ್ಕೆ ಎಲ್ಲರು ಸಹ ಕೈಜೋಡಿಸಿ ಕೆಲಸ ಪ್ರಾರಂಭ ಮಾಡಿದ್ದಾರೆ. ನಮ್ಮ ನಿರೀಕ್ಷೆ ಈ ಒಂದು ಕಾರ್ಯಕ್ರಮಕ್ಕೆ ಅತ್ಯಂತ ಜನ ಬೆಂಬಲವನ್ನ ನೀಡಿದ್ದಾರೆ. ಪಂಚರತ್ನ ಯಾತ್ರೆಗೆ ಆಶೀರ್ವಾದ ಮಾಡಿದ್ದಾರೆ. ಅಂತಿಮವಾಗಿ ಈ ಕಾರ್ಯಕ್ರಮದಲ್ಲಿ 10ಲಕ್ಷ ಜನರ ಸಮಾವೇಶಕ್ಕೆ ಸಿದ್ಧತೆ ನಡೆಯುತ್ತಿದೆ. ಈ ಒಂದು ಕಾರ್ಯಕ್ರಮ 2023ರ ಚುನಾವಣೆ ಪ್ರಚಾರಕ್ಕೂ ಸಾಕ್ಷಿಯಾಗಲಿದೆ ಎಂದರು.
ಚಿತ್ರ ನಟ,ನಟಿಯರಿಗೆ ಕ್ಷೇತ್ರ ಬೇಕಿಲ್ಲ: ನಾನು ಒಂದೇ ಕ್ಷೇತ್ರದಲ್ಲಿ ಸ್ಪರ್ಧೆ.
ರಾಜ್ಯ ರಾಜಕಾರಣಕ್ಕೆ ನಟಿ ರಮ್ಯಾ ಎಂಟ್ರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿಕೆ, ಚಿತ್ರ ನಟ,ನಟಿಯರಿಗೆ ಕ್ಷೇತ್ರ ಬೇಕಿಲ್ಲ. ಸಹಜವಾಗಿ ಜನಪ್ರಿಯತೆ ಇರುತ್ತೆ. ನನ್ನ ಸಹೋದರಿ ಚನ್ನಪಟ್ಟಣದಿಂದ ಸ್ಪರ್ಧೆ ಮಾಡುತ್ತಾರೆ ಅಂತಿದ್ದಾರೆ. ಮೂರಲ್ಲ,ಮೂವತ್ತು ಕ್ಷೇತ್ರದಲ್ಲಿ ಬೇಕಾದರೂ ಪ್ರಸ್ತಾಪ ಮಾಡಬಹುದು. ಅದಕ್ಕೆಲ್ಲ ನಾನು ತಲೆ ಕೆಡಿಸಿಕೊಳ್ಳುವುದಿಲ್ಲ. ಯಾರ್ಯಾರೋ ವದಂತಿ ಹಬ್ಬಿಸುತ್ತಿದ್ದಾರೆ. ಸಂಸದರು ಮಂಡ್ಯದಿಂದ ಸ್ಪರ್ಧಿಸಿದರೆ ನಾನು ಅರ್ಜಿ ಹಾಕುತ್ತೇನೆ ಅಂತಲೂ ಹೇಳುತ್ತಿದ್ದಾರೆ. ನಾನು ಚನ್ನಪಟ್ಟಣದಿಂದ ಸ್ಪರ್ಧೆ ಮಾಡುತ್ತೇನೆ. ಎರಡು ಕ್ಷೇತ್ರದಿಂದ ಸ್ಪರ್ಧೆ ಮಾಡುವ ಪ್ರಶ್ನೆಯೂ ಇಲ್ಲ. ಅದೆಲ್ಲ ಊಹಾಪೋಹ ಅಷ್ಟೆ ಎಂದು ಸ್ಪಷ್ಟನೆ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy