ಹಿಂದೂ ವಿರೋಧಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ ಆರೋಪದ ಮೇಲೆ ನಟ ಚೇತನ್ ಅವರ ವಿರುದ್ಧ ಹಿಂದೂಪರ ಸಂಘಟನೆಗಳು ಪೊಲೀಸ್ ಠಾಣೆಗೆ ದೂರು ನೀಡಿದ್ದವು. ಕೇಸ್ ದಾಖಲಿಸಿಕೊಂಡಿದ್ದ ಶೇಷಾದ್ರಿಪುರಂ ಠಾಣಾ ಪೊಲೀಸರು ನಟ ಚೇತನ್ ರನ್ನ ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು.
ಇದೀಗ ನಟ ಚೇತನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ 32ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಇನ್ನು ನಟ ಚೇತನ್ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy