ಇಡೀ ರಾತ್ರಿ ಮೊಬೈಲ್ ಚಾರ್ಜ್ ಗೆ ಇಟ್ಟು ಮಲಗುವವರೇ ಎಚ್ಚರ. ಯಾಕೆಂದರೆ ಇಡೀರಾತ್ರಿ ಚಾರ್ಜ್ ಗಿಟ್ಟಿದ್ದ ಮೊಬೈಲ್ ನಿಂದಾಗಿ ಶಾರ್ಟ್ ಸರ್ಕ್ಯೂಟ್ ಆಗಿ ಮೊಬೈಲ್ ಅಂಗಡಿ ಸುಟ್ಟು ಭಸ್ಮವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ವಿಜಯನಗರದಲ್ಲಿ ಈ ಘಟನೆ ನಡೆದಿದೆ. ಅಂಗಡಿ ಮಾಲೀಕ ರಾತ್ರಿ ಮೊಬೈಲ್ ಚಾರ್ಜ್ ಇಟ್ಟು ಮನೆಗೆ ಹೋಗಿದ್ದರು. ಇಂದು ಬೆಳಗ್ಗೆ ಅಂಗಡಿ ಬಾಗಿಲು ತೆರೆಯಲು ಬಂದಾಗ ಮಾಲೀಕನಿಗೆ ಶಾಕ್ ಆಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಮೊಬೈಲ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಅಂಗಡಿ ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA