ಒಂಟಿ ಮಹಿಳೆಯನ್ನು ಹಿಂಬಾಲಿಸಿಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ನಡೆಸಿ, ಬರ್ಬರವಾಗಿ ಹತ್ಯೆ ನಡೆಸಿದ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಹೋಬಳಿಯ ಚಿಕ್ಕಾವಳ್ಳಿ ಗ್ರಾಮದಲ್ಲಿ ನಡೆದಿದೆ.
55 ವರ್ಷದ ವಯಸ್ಸಿನ ಸಾವಿತ್ರಮ್ಮ ಕೃತ್ಯದಲ್ಲಿ ಬಲಿಯಾದ ಮಹಿಳೆಯಾಗಿದ್ದು, ಸಾವಿತ್ರಮ್ಮ ರಾಗಿ ಹಿಟ್ಟು ಆಡಿಸಲು ಹೋಗುವ ಸಂದರ್ಭದಲ್ಲಿ ಹಿಂಬಾಲಿಸಿ, ಬಲವಂತವಾಗಿ ಎಳೆದುಕೊಂಡು ಹೋಗಿ ಬಲತ್ಕಾರ ಮಾಡಲಾಗಿದೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಬಂದ ಶ್ವಾನದಳದ ತಂಡ ಸ್ಥಳ ಪರಿಶೀಲನೆ ನಡೆಸಿದ್ದು, ಈ ವೇಳೆ ಆರೋಪಿಯು ಸಿಕ್ಕಿ ಬಿದ್ದಿದ್ದಾನೆ. ಇದೇ ಗ್ರಾಮದ ಮಲ್ಲಿಕಾರ್ಜುನ ಎಂಬಾತ ಹತ್ಯೆ ಆರೋಪಿಯಾಗಿದ್ದು, ಈತ ಸಾವಿತ್ರಮ್ಮನವರ ಸಂಬಂಧಿಯಾಗಿದ್ದು, ಜಮೀನು ವಿಚಾರದಲ್ಲಿ ಸಾವಿತ್ರಮ್ಮನವರಿಗೂ ಆರೋಪಿಗೂ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಇದೇ ದ್ವೇಷದ ಹಿನ್ನೆಲೆಯಲ್ಲಿ ಸಾವಿತ್ರಮ್ಮನವರನ್ನು ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದಾನೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಸದ್ಯ ಆರೋಪಿ ಮಲ್ಲಿಕಾರ್ಜುನನನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಪೊಲೀಸರ ತನಿಖೆಯ ಬಳಿಕ ಘಟನೆಯ ಸತ್ಯಾಸತ್ಯತೆ ತಿಳಿದು ಬರಬೇಕಿದೆ.
ಘಟನಾ ಸ್ಥಳಕ್ಕೆ ತುಮಕೂರು ಜಿಲ್ಲೆಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮರಿಯಪ್ಪ, ಮಧುಗಿರಿ ಉಪ ಅಧೀಕ್ಷಕ ವೆಂಕಟೇಶ್ ನಾಯ್ಡು,ಸಿಪಿಐ ಸುರೇಶ್ ಕೆ, ಪಿಎಸ್ ಐ ಪ್ರದೀಪ್ ಸಿಂಗ್, ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA