ಪಾಟ್ನಾ : ಮಧ್ಯಾಹ್ನದ ಬಿಸಿ ಊಟ ಸೇವಿಸಿ ಹಲವಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯ ಫೋರ್ಬೆಸ್ಗಂಜ್ ಸರ್ಕಾರಿ ಶಾಲೆಯಲ್ಲಿ ಇಂದು ನಡೆದಿದೆ.
ವಿದ್ಯಾರ್ಥಿಗಳ ಮಧ್ಯಾಹ್ನದ ಊಟಕ್ಕೆ ಕಿಚಿಡಿ ಬಡಿಸಿದರು. ಆಗ ವಿದ್ಯಾರ್ಥಿಯೊಬ್ಬನಿಗೆ ತನ್ನ ತಟ್ಟೆಯಲ್ಲಿ ಹಾವಿನ ಮರಿ ಸಿಕ್ಕಿತ್ತು ಕೂಡಲೇ ಊಟ ಮಾಡುದನ್ನು ನಿಲ್ಲಿಸಲಾಯಿತು ಆದರೆ ಹೆಚ್ಚಿನ ಮಕ್ಕಳು ಆಗಲೇ ಊಟ ಮಾಡಿದ್ದರು ಎನ್ನಲಾಗಿದೆ.
ಆಹಾರ ಸೇವಿಸಿದ ವಿದ್ಯಾರ್ಥಿಗಳಿಗೆ ವಾಂತಿಭೇದಿ ಕಾಣಿಸಿಕೊಂಡಾಗ ಕೂಡಲೇ ಶಾಲಾ ಸಿಬ್ಬಂದಿ ಅಸ್ವಸ್ಥ ವಿದ್ಯಾರ್ಥಿಗಳನ್ನು ಫೋರ್ಬ್ಸ್ಗಂಜ್ ನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಎಸ್ಡಿಎಂ, ಎಸ್ಡಿಒ, ಡಿಎಸ್ಪಿ ಸೇರಿದಂತೆ ಎಲ್ಲಾ ಉನ್ನತಾಧಿಕಾರಿಗಳು ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಸ್ಥಿತಿಗತಿ ವಿಚಾರಿಸಿದರು. ಅಲ್ಲದೆ, ಘಟನೆಯ ಬಗ್ಗೆ ತನಿಖೆ ನಡೆಸಿ ಸಂಪೂರ್ಣ ವರದಿ ಸಲ್ಲಿಸುವಂತೆ ಶಿಕ್ಷಣ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಿಗೆ ಆದೇಶಿಸಲಾಗಿದೆ.
ವಿಷಯ ತಿಳಿಯುತಿದಂತೆ ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಹಾಗೂ ಪೋಷಕರು ಶಾಲಾ ಸಿಬ್ಬಂದಿಯ ವಿರುದ್ಧ ವಾಗ್ದಾಳಿ ನಡೆಸಿದರು. ಮಾತ್ರವಲ್ಲದೆ ಶಾಲಾ ಮುಖ್ಯೋಪಾಧ್ಯಾಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA