ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭವಾಗಿದ್ದು ಬೆಳಗಿನ ಜಾವ ಪೂಜಾ ಕೈಂಕರ್ಯಗಳು ಮತ್ತು ಸೆಂಗೋಲ್ ಪ್ರತಿಷ್ಠಾಪನೆ ನೆರವೇರಿತು.
ಮಧ್ಯಾಹ್ನ 12 ಗಂಟೆ ನಂತರ ಎರಡನೇ ಹಂತದ ಕಾರ್ಯಕ್ರಮ ಆರಂಭವಾಗಲಿದೆ. ಎರಡನೇ ಹಂತದ ಕಾರ್ಯಕ್ರಮದಲ್ಲಿ ದೇಶದ ಹಲವು, ವಿವಿಧ ಪಕ್ಷಗಳ ನಾಯಕರು ಭಾಗಿಯಾಗಲಿದ್ದಾರೆ. ಎರಡನೇ ಹಂತದ ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಅಧಿಕೃತ ಆರಂಭವಾಗಲಿದೆ. ಈ ಸಂದರ್ಭದಲ್ಲಿ ಎರಡು ಕಿರುಚಿತ್ರಗಳನ್ನು ಪ್ರದರ್ಶಿಸಲಾಗುತ್ತದೆ.
ಇದಾದ ಬಳಿಕ ಉಪರಾಷ್ಟ್ರಪತಿ ಮತ್ತು ರಾಷ್ಟ್ರಪತಿಗಳ ಸಂದೇಶವನ್ನು ರಾಜ್ಯಸಭೆಯ ಉಪಾಧ್ಯಕ್ಷರು ಓದಲಿದ್ದಾರೆ. ನಂತರ ಲೋಕಸಭೆ ಸ್ಪೀಕರ್ ಭಾಷಣ ಮಾಡಲಿದ್ದಾರೆ. ಇದೇ ಸಂದರ್ಭದಲ್ಲಿ 75ರೂ ಮುಖಬೆಲೆಯ ನಾಣ್ಯ ಮತ್ತು ಅಂಚೆಚೀಟಿ ಬಿಡುಗಡೆ ಮಾಡಲಾಗುತ್ತದೆ. ಕೊನೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮವು ಮಧ್ಯಾಹ್ನ 2:30 ರ ಸುಮಾರಿಗೆ ಸಂಪನ್ನವಾಗುತ್ತದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA