ಮಧುಗಿರಿ: ಕರಡಿ ದಾಳಿಗೆ ಒಳಗಾಗಿ ಗಾಯಗೊಂಡು ಪ್ರಗ್ನೆ ತಪ್ಪಿದ ದ್ವಿಚಕ್ರ ವಾಹನ ಸವಾರರನ್ನು ಕುರಿಗಾಹಿಗಳು ರಕ್ಷಿಸಿ ಆಸ್ಪತ್ರೆಗೆ ಸೇರಿಸಿರುವ ಘಟನೆ ನಡೆದಿದೆ.
ತಾಲೂಕಿನ ಮಿಡಗೇಶಿ ಹೋಬಳಿಯ ಹನುಮಂತಪುರದ ವಾಸಿ ಈರಣ್ಣ ( ಕೃಷ್ಣ)38 ಮಿಡಗೇಶಿಯಿಂದ ಲಕ್ಲಿಹಟ್ಟಿಗೆ ಹನುಮಂತಪುರ ಮಾರ್ಗವಾಗಿ ಶುಕ್ರವಾರ ಸಂಜೆ ಸುಮಾರು 6:30ರ ಸಮಯದಲ್ಲಿ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆ ಈರಣ್ಣ ಬೆಟ್ಟದ ಹತ್ತಿರ ಎರಡು ಕರಡಿಗಳು ಪ್ರತ್ಯಕ್ಷವಾಗಿದ್ದವು. ಇದರಲ್ಲಿ ದೊಡ್ಡ ಕರಡಿ ದಾಳಿ ಮಾಡಿದ್ದು, ಈ ವೇಳೆ ಗಾಬರಿಗೊಂಡ ದ್ವಿಚಕ್ರ ವಾಹನ ಸವಾರ ವಾಹನದಿಂದ ನೆಲಕ್ಕೆ ಬಿದ್ದಿದ್ದು, ಪರಿಣಾಮವಾಗಿ ತಲೆಗೆ ಹಾಗೂ ಕೈಗೆ ಪೆಟ್ಟಾಗಿದೆ.
ಇದೇ ವೇಳೆ ಸ್ಥಳದಲ್ಲಿ ಕುರಿಗಾಹಿಗಳ ಸಹಾಯದಿಂದ ಮಿಡಿಗೇಶಿ ಪ್ರಾಥಮಿಕ ಆಸ್ಪತ್ರೆಗೆ ಅವರು ದಾಖಲಾಗಿದ್ದು, ಪ್ರಥಮ ಚಿಕಿತ್ಸೆ ಪಡೆದು ಮನೆ ತೆರಳಿದ್ದರು. ಶನಿವಾರ ಸಂಜೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು.
ತಪಾಸಣೆ ನಡೆಸಿದ ವೈದ್ಯರು ಹೆಚ್ಚುವರಿ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ಕಳುಹಿಸಿ ಕೊಟ್ಟಿದ್ದಾರೆ. ವಿಷಯ ತಿಳಿದ ಅರಣ್ಯಾಧಿಕಾರಿ ಮುತ್ತುರಾಜ್ ಆಸ್ಪತ್ರೆಗೆ ಭೇಟಿ ನೀಡಿ ಘಟನೆಯ ಬಗ್ಗೆ ವಿವರಗಳನ್ನು ಕಲೆಹಾಕಿದ್ದಾರೆ.
ವರದಿ: ಅಬಿದ್, ಮಧುಗಿರಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA