ಪತ್ನಿಯನ್ನು ಹತ್ಯೆಗೈದು, ಬಳಿಕ ಆಸ್ಪತ್ರೆಗೆ ಕರೆ ತಂದು ಆಕೆ ಮಾತನಾಡುತ್ತಿಲ್ಲ ಎಂದು ಕಥೆ ಕಟ್ಟಿದ್ದ ಪತಿಯನ್ನು ಯಶವಂತಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಧಿತ ಆರೋಪಿಯನ್ನು ಶರತ್ ಎಂದು ಗುರುತಿಸಲಾಗಿದೆ.
ಪ್ರಿಯಾ (19) ಕೊಲೆಯಾದ ಮಹಿಳೆ. ಕಳೆದ ಜೂನ್ 1ರಂದು ಯಶವಂತಪುರದ ಖಾಸಗಿ ಆಸ್ಪತ್ರೆಗೆ ಪತ್ನಿಯ ಶವದೊಂದಿಗೆ ಬಂದಿದ್ದ ಆರೋಪಿ ಶರತ್ ತನ್ನ ಪತ್ನಿ ಮಾತನಾಡುತ್ತಿಲ್ಲ ಎಂದು ಆಸ್ಪತ್ರೆಯಲ್ಲಿ ಗೋಳಾಡಿದ್ದ. ಈ ಬಗ್ಗೆ ವೈದ್ಯರು ಪರಿಶೀಲನೆ ನಡೆಸಿದಾಗ ಆಕೆ ಸಾವನ್ನಪ್ಪಿರುವುದು ಗೊತ್ತಾಗಿತ್ತು. ಪತ್ನಿ ಸಾವನ್ನಪ್ಪಿರುವುದನ್ನು ವೈದ್ಯರು ದೃಢಪಡಿಸಿದ ಬಳಿಕವೂ ಆರೋಪಿ ಜೋರಾಗಿ ಅತ್ತು ಗೋಳಾಡಿದ್ದ. ಈ ಸಂಬಂಧ ಆಸ್ಪತ್ರೆ ಸಿಬ್ಬಂದಿ ಅನುಮಾನಾಸ್ಪದ ಸಾವು ಎಂದು ಪೊಲೀಸರಿಗೆ ಮಾಹಿತಿ ರವಾನಿಸಿದ್ದರು. ಬಳಿಕ ಮೃತ ಪ್ರಿಯಾಳ ತಾಯಿ ನೀಡಿದ ದೂರಿನನ್ವಯ ಯಶವಂತಪುರ ಠಾಣಾ ಪೊಲೀಸರು ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ಪ್ರಕರಣದ ತನಿಖೆಗೆ ಮುಂದಾಗಿದ್ದರು.
ಆರೋಪಿ ಶರತ್ ಗೆ ಪ್ರಿಯಾ ಎರಡನೇ ಹೆಂಡತಿ. ಮದುವೆಯಾಗಿ ಮೊದಲ ಹೆಂಡತಿ ಇದ್ದರೂ ಶರತ್ ಎರಡನೇ ಮದುವೆಯಾಗಿದ್ದ. ಅಲ್ಲದೆ ಆರೋಪಿ ಶರತ್ ಪತ್ನಿ ಪ್ರಿಯಾಳೊಂದಿಗೆ ಯಶವಂತಪುರದ ಸಂಜಯ್ ಗಾಂಧಿ ನಗರದಲ್ಲಿ ವಾಸವಿದ್ದ ಎಂದು ತಿಳಿದುಬಂದಿದೆ.
ಇನ್ನು,’ಮೊದಲ ಪತ್ನಿಯ ಬಳಿ ಹೋಗ್ತಿಯಾ’ ಎಂದು ಪ್ರಿಯಾ ಪದೇ ಪದೇ ಜಗಳವಾಡುತ್ತಿದ್ದಳು. ಇದೇ ವಿಚಾರಕ್ಕೆ ಇಬ್ಬರ ನಡುವೆ ಕೆಲ ದಿನಗಳಿಂದ ಜಗಳವಾಗುತ್ತಿತ್ತು ಎನ್ನಲಾಗಿದೆ. ಜೂನ್ 1ರಂದು ಸಂಜೆ ಮತ್ತೆ ಇದೇ ವಿಚಾರವಾಗಿ ಜಗಳ ಆರಂಭವಾಗಿ ಶರತ್ ಪ್ರಿಯಾಳ ಕತ್ತು ಹಿಸುಕಿದ್ದ. ಈ ವೇಳೆ ಪ್ರಿಯಾಗೆ ಉಸಿರಾಟದ ತೊಂದರೆ ಉಂಟಾಗಿ ಸಾವನ್ನಪ್ಪಿದ್ದಳು. ಇದರಿಂದ ಗಾಬರಿಗೊಂಡ ಶರತ್ ಘಟನೆಯನ್ನು ಮುಚ್ಚಿಡಲು ಪತ್ನಿಯ ಮೃತದೇಹವನ್ನು ಆಸ್ಪತ್ರೆಗೆ ತಂದು ಹೈಡ್ರಾಮಾ ಮಾಡಿದ್ದ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L2Uvw2cNJZO5mXqIX4WA7h
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA