ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಪಾವಗಡ ವ್ಯಾಪ್ತಿಯ ಸಿ.ಕೆ.ಪುರ ವಲಯದ ಸಿ.ಕೆ.ಪುರ ಗ್ರಾಮದ ಮಸೀದಿಯಲ್ಲಿ ಇಂದು ಸ್ವಸಹಾಯ ಸಂಘದ ಸದಸ್ಯರನ್ನು ಒಗ್ಗೂಡಿಸಿ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು.
ಈ ಸಂದರ್ಭ ಮೇಲ್ವಿಚಾರಕರಾದ ಮನು ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವರ್ಷದಲ್ಲಿ ಎರಡು ಬಾರಿ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಮಾಡಲಾಗುತ್ತದೆ. ಜಾತಿ ಧರ್ಮ ಭೇದವಿಲ್ಲದೆ ದೇವಸ್ಥಾನ ಮಸೀದಿ, ಚರ್ಚ್, ಬಸದಿ, ಕಲ್ಯಾಣಿ ಮುಂತಾದ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛ ಮಾಡಲಾಗುತ್ತದೆ. 2018ರಲ್ಲಿ ಧಾರ್ಮಿಕ ಸ್ವಚ್ಛತಾ ನಗರಿ ಎಂದು ರಾಷ್ಟ್ರ ಪ್ರಶಸ್ತಿ ಧರ್ಮಸ್ಥಳಕ್ಕೆ ದೊರೆತ ಜ್ಞಾಪಕಾರ್ಥವಾಗಿ ಈ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಮಾಡಲಾಗುತ್ತದೆ. ಜನರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ