ಬೆಂಗಳೂರು: ಚೈತ್ರಾ ಕುಂದಾಪುರ ವಂಚನೆ ಪ್ರಕರಣ ಮಾದರಿಯ ಇನ್ನೊಂದು ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಕೊಪ್ಪಳದ ಕನಕಗಿರಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಜಿ.ತಿಮ್ಮಾರೆಡ್ಡಿ ಹಣ ಕಳೆದುಕೊಂಡವರಾಗಿದ್ದಾರೆ. ಪತ್ನಿ ಗಾಯತ್ರಿ ತಿಮ್ಮಾರೆಡ್ಡಿಗೆ ಬಿಜೆಪಿ ಟಿಕೆಟ್ ಕೊಡಿಸಲು ದೆಹಲಿ ಮೂಲದ ವಿಶಾಲ್ ನಾಗ್ ಮತ್ತು ಬೆಂಗಳೂರಿನ ಜೀತು ಹಾಗೂ ಗೌರವ್ ಎಂಬುವವರು ಆರೋಪಿಗಳಾಗಿದ್ದಾರೆ.
ಆರೋಪಿಗಳು ತಮಗೆ ಕೇಂದ್ರ ಗೃಹಸಚಿವ ಅಮಿತ್ ಶಾ ಗೊತ್ತು, ಆರ್ ಎಸ್ ಎಸ್ ನಾಯಕರು ಗೊತ್ತು ಎಂದು ತಿಮ್ಮಾರೆಡ್ಡಿಯವರನ್ನು ಪರಿಚಯಿಸಿಕೊಂಡಿದ್ದರು. ಬಳಿಕ ರಾಜ್ಯದಲ್ಲಿ ಸಮೀಕ್ಷೆ ನಡೆಸಿದ್ದೇವೆ. ಅದರಲ್ಲಿ ನಿಮ್ಮ ಹೆಸರು ಮುಂಚೂಣಿಯಲ್ಲಿದೆ ಎಂದು ಅವರನ್ನು ನಂಬಿಸಿದ್ದರು.
ಬಳಿಕ ಆರೋಪಿಗಳ ಮಾತು ನಂಬಿ ತಿಮ್ಮಾರೆಡ್ಡಿ 21ಲಕ್ಷ ಹಣ ನೀಡಿ ಕೈ ಸುಟ್ಟುಕೊಂಡಿದ್ದರು. ಈ ಸಂಬಂಧ ಬೆಂಗಳೂರಿನ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.