ಬೆಂಗಳೂರು: ಪ್ರೇಮಿಗಳ ಖಾಸಗಿ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಹರಿ ಬಿಡುವುದಾಗಿ ಬ್ಲಾಕ್‌ಮೇಲ್ ಮಾಡಿ 1 ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟಿದ್ದ ಇಬ್ಬರು ಆರೋಪಿಗಳನ್ನು ಚಂದ್ರಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ನಿವಾಸಿಗಳಾದ ನಯನಾ ಮತ್ತು ಕಿರಣ್ ಬಂಧಿತರು.
ಆರೋಪಿ ನಯನಾ ಸಂತ್ರಸ್ತ ಯುವತಿಯ ಸಂಬಂಧಿಯಾಗಿದ್ದಳು. ಆರೋಪಿಗಳು ಕೆಂಗೇರಿ ಮುಖ್ಯರಸ್ತೆಯ ಕೆಂಚನಾಪುರದಲ್ಲಿ ಹೋಟೆಲ್ ನಡೆಸುತ್ತಿದ್ದರು.