ಚೈತ್ರಾ ಕುಂದಾಪುರ ಗ್ಯಾಂಗ್ ನಿಂದ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಭಿನವ ಹಾಲಶ್ರೀ ಸ್ವಾಮೀಜಿ ಕೂಡ ಭಾಗಿಯಾಗಿರುವುದು ಬಹಿರಂಗಗೊಂಡಿದ್ದು, ಸದ್ಯ ತಲೆ ಮರೆಸಿಕೊಂಡಿರುವ ಶ್ರೀಗಳು ತನ್ನ ವಿರುದ್ಧ ದೂರು ನೀಡಿದ ಉದ್ಯಮಿ ಗೋವಿಂದಬಾಬು ಪೂಜಾರಿ ವಿರುದ್ಧವೇ ಪ್ರತಿ ದೂರು ನೀಡಿದ್ದಾರೆ.
ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ವಂಚಿಸಿದ್ದಾರೆಂದು ತನ್ನ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ತನ್ನ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಅಭಿನವ ಹಾಲಶ್ರೀ ದೂರು ನೀಡಿದ್ದಾರೆ.
5 ಕೋಟಿ ವಂಚನೆ ಪ್ರಕರಣ ದಿನಕ್ಕೊಂದು ಬಣ್ಣ ಪಡೆದುಕೊಳ್ಳುತ್ತಿದ್ದು, ಈ ದಿನದ ಬೆಳವಣಿಗೆಯಲ್ಲಿ ಉದ್ಯಮಿ ಗೋವಿಂದಬಾಬು & ಆಪ್ತರ ವಿರುದ್ಧ ಅಭಿನವ ಹಾಲಶ್ರೀ ದೂರು ಸಲ್ಲಿಸಿದ್ದಾರೆ.