ಬೆಂಗಳೂರು ಹೊರ ವಲಯದಲ್ಲಿರುವ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿ ಶೂ, ಚಪ್ಪಲಿ ಗೋಡೌನ್‌ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ. ಘಟನೆಯಲ್ಲಿ ಐದು ಕೋಟಿಗೂ ಅಧಿಕ ಮೌಲ್ಯದ ಶೂಗಳು ಹಾಗೂ ಚಪ್ಪಲಿಗಳು ಸುಟ್ಟು ಭಸ್ಮವಾಗಿವೆ.
ಗೋಡೌನ್ ಬಳಿಯ ವಿದ್ಯುತ್ ಕಂಬಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಈ ವೇಳೆ ಉತ್ತರಹಳ್ಳಿ ನಿವಾಸಿ ಶ್ರೀನಿವಾಸ್ ಎಂಬುವವರಿಗೆ ಸೇರಿದ ಎಎಸ್‌ಆರ್ ಮಾರ್ಕೆಟಿಂಗ್, ಯುನಿಕಾರ್ನ್ ಮಾರ್ಕೆಟಿಂಗ್ ಎಂಬ ಹೆಸರಿನ ಗೋಡೌನ್ ನಲ್ಲಿ ಅವಘಡ ಸಂಭವಿಸಿದೆ.