ಶಿಕ್ಷಣ ಸಚಿವ ಸಚಿವ ಮಧು ಬಂಗಾರಪ್ಪರಿಂದ ನನಗೆ ಜೀವ ಬೆದರಿಕೆ ಇದೆ ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಮಧು ಬಂಗಾರಪ್ಪ ಬೆಂಬಲಿಗರು ಕರೆ ಮಾಡಿ ಬೆದರಿಕೆ ಹಾಕುತ್ತಿದ್ದಾರೆ. ನನಗೆ ಜೀವ ಬೆದರಿಕೆ ಇದೆ. ಇವತ್ತು ಪೊಲೀಸ್ ಕಮಿಷನರ್ ಭೇಟಿ ಮಾಡುತ್ತಿದ್ದು, ಮಧು ಬಂಗಾರಪ್ಪ ವಿರುದ್ಧ ದೂರು ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ಹರಿಪ್ರಸಾದ್ ಅವರು ಹಿಂದುಳಿದ ವರ್ಗದವರು. ಅವರಿಗೆ ಸ್ಥಾನಮಾನ ಕೇಳುವುದರಲ್ಲಿ ಏನು ತಪ್ಪಿದೆ. ಬೇರೆ ಸಮುದಾಯದವರು ಹೋರಾಟ ಮಾಡಿದ್ದರಲ್ಲಾ. ಸಮುದಾಯಕ್ಕೆ ಮಧು ಬಂಗಾರಪ್ಪ ಕೊಡುಗೆ ಏನು ಎಂದು ಇದೇ ವೇಳೆ ಸ್ವಾಮೀಜಿ ಪ್ರಶ್ನಿಸಿದರು.