ಮಧುಗಿರಿ: ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ಮನೆ ಬೀಗ ಮುರಿದು ಒಳ ನುಗ್ಗಿ ಕಳ್ಳತನ ಮಾಡಿರುವ ಘಟನೆ ಶುಕ್ರವಾರ ಬೆಳಗ್ಗೆ 11:30 ಸಮಯದಲ್ಲಿ ನಡೆದಿದೆ. ಪಟ್ಟಣದ ಡಿಡಿಪಿಐ ಕಚೇರಿ ಹಿಂಭಾಗದ ಮನೆಯಲ್ಲಿ ವಾಸ ಇರುವ ಆಶಾ (30) ಎಂಬುವರು ಮನೆಗೆ ಬೀಗ ಹಾಕಿ ಕೆಲಸಕ್ಕೆ ತೆರಳಿದ್ದರು.
ಮನೆಗೆ ಬೀಗ ಹಾಕಿರುವುದನ್ನು ಕಂಡ ಕಳ್ಳರು, ಬೀಗ ಒಡೆದು ಒಳ ನುಗ್ಗಿ ಬೀರುವಿನಲ್ಲಿದ್ದ ಸುಮಾರು ನಾಲ್ಕು ಲಕ್ಷ ಹಣ ಹಾಗೂ 60 ಗ್ರಾಂ ಚಿನ್ನ ಕದ್ದು ಪರಾರಿಯಾಗಿದ್ದಾರೆ, ಘಟನೆಗೆ ಸಂಬಂಧಿಸಿ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಅಬಿದ್ ಮಧುಗಿರಿ