ಬೆಂಗಳೂರು: ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್ ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಿಎಂ ಹೇಳಿದರು.
ಕೆಳ ಹಂತದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಕ್ರಮ ಕೈಗೊಂಡು ಕೈ ತೊಳೆದು ಕೊಳ್ಳುವುದಿಲ್ಲ, ಹಿರಿಯ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳುತ್ತೇವೆ. ಸುಳ್ಳು ಸುದ್ದಿ, ವದಂತಿಗಳ ಮೂಲಕ ಸಮಾಜದ ಶಾಂತಿ ಕದಡುವವರ ವಿರುದ್ಧ ಸ್ವಯಂಪ್ರೇರಿತ ಎಫ್ ಐಆರ್ ದಾಖಲಿಸಿಕೊಂಡು ಕ್ರಮ ಕೈಗೊಳ್ಳಬೇಕು ಎಂದರು.