ದಾವಣಗೆರೆ: ಲೋಕಸಭಾ ಚುನಾವಣೆ ಸಮೀಪಿಸಲಿ. ಮೋದಿ ಅವರು ಮತ್ತೆ ಪ್ರಧಾನಿ ಆಗುತ್ತಾರಾ ಅಥವಾ ಇಲ್ಲವಾ ಎಂಬ ಬಗ್ಗೆ ಅವತ್ತೇ ಹೇಳುವೆ ಎಂದು ಕೋಡಿಮಠ ಮಹಾಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದ್ದಾರೆ.
ದಾವಣಗೆರೆಯ ಹೊನ್ನಾಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಬಳಿಕ ಒಂದು ಪಕ್ಷ ಆಡಳಿತ ನಡೆಸುತ್ತದೆ ಎಂದು ಹೇಳಿದ್ದೆ. ನಾನು ಹೇಳಿದಂತೆಯೇ ಆಗಿದೆ. ಅದರಂತೆ ಅವಘಡಗಳಿವೆ. ಅ ಅವಘಡಗಳು ಕಳೆಯಬೇಕು. ಅ ಬಳಿಕ ಮುಂದಿನ ಭವಿಷ್ಯ ಹೇಳುವೆ ಎಂದು ತಿಳಿಸಿದ್ದಾರೆ.
ಕಾರ್ತಿಕ ಮಾಸ, ಸಂಕ್ರಾಂತಿ ಸಂದರ್ಭದಲ್ಲಿ ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಕೆಲ ಅವಘಡಗಳು ಎದುರಾಗಲಿವೆ. ರಾಜ್ಯ-ರಾಷ್ಟ್ರದಲ್ಲಿ ನಡೆಯುವ ಅವಘಡಗಳಿಂದ ಪಾರು ಮಾಡಿದರೆ ಮುಂದಿನ ಭವಿಷ್ಯ ಹೇಳುವೆ ಎಂದು ಮಾತನಾಡಿದ್ದಾರೆ.