ಬೆಂಗಳೂರು: ಜನನಿಬಿಡ ಟಿನ್ ಫ್ಯಾಕ್ಟರಿ ಬಸ್ ನಿಲ್ದಾಣದಲ್ಲಿ ಶನಿವಾರ ರಾತ್ರಿ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತನನ್ನು 28 ವರ್ಷದ ರಫೀಕ್ ಅಹ್ಮದ್ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದರು. ರಫೀಕ್ ಅಹ್ಮದ್ ನನ್ನು ಚಾಕುವಿನಿಂದ ಇರಿದು ಕೊಂದಿರುವಂತೆ ತೋರುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆತನಿಗೆ ಗೊತ್ತಿದ್ದ ಆರೋಪಿಗಳಿಗೆ ಈ ಕೃತ್ಯವೆಸಗಿರುವ ಸಾಧ್ಯತೆ ಇದೆ ಎಂದು ವೈಟ್ ಫೀಲ್ಡ್, ಡಿಸಿಪಿ ಡಾ ಸಂಜೀವ್ ಎಂ ಪಾಟೀಲ್ ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. ಪ್ರಕರಣದಲ್ಲಿ ಹೆಚ್ಚಿನ ಮಾಹಿತಿ ತಿಳಿದುಬರಬೇಕಾಗಿದೆ.