ಇರಾಕ್ ನಲ್ಲಿ ಮದುವೆ ಸಂಭ್ರಮಾಚರಣೆಯ ವೇಳೆ ಸಂಭವಿಸಿದ ಬೆಂಕಿ ಅಪಘಾತದಲ್ಲಿ 113 ಮಂದಿ ಸಾವನ್ನಪ್ಪಿದ್ದಾರೆ. ದುರಂತದಲ್ಲಿ 150ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಉತ್ತರ ನಿನೆವೆ ಪ್ರಾಂತ್ಯದ ಅಲ್ ಹಮ್ದಾನಿಯಾ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ. ಸಂಭ್ರಮಾಚರಣೆ ವೇಳೆ ಪಟಾಕಿ ಸಿಡಿಸಿದ ನಂತರ ಬೆಂಕಿ ಹೊತ್ತಿಕೊಂಡಿದೆ ಎಂದು ನಂಬಲಾಗಿದೆ. ವರದಿಗಳ ಪ್ರಕಾರ, ಅಪಘಾತದಲ್ಲಿ ವಧು–ವರರು ಸಾವನ್ನಪ್ಪಿದ್ದಾರೆ.
ನೂರಾರು ಜನರು ಮದುವೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಮಂಗಳವಾರ ಸಂಜೆ ಸಂಭ್ರಮಾಚರಣೆ ನಡೆಯುತಿತ್ತು. ಮದುವೆ ನಡೆದ ಸಭಾಂಗಣದಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ಅಪಘಾತದ ವ್ಯಾಪ್ತಿ ಹೆಚ್ಚಿಸಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.
ಕಟ್ಟಡಗಳು ಕುಸಿದಿರುವುದು ಕೂಡ ದುರಂತದ ತೀವ್ರತೆಯನ್ನು ಹೆಚ್ಚಿಸಿದೆ. ಇರಾಕ್ ನ, ರಾಜ್ಯ ಸುದ್ದಿ ಸಂಸ್ಥೆ ಐಎನ್ ಎ ವರದಿ ಮಾಡಿದೆ, ಬೆಂಕಿಯ ಅಪಾಯ ಹೆಚ್ಚು ಮತ್ತು ಕಡಿಮೆ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡವು ಬೆಂಕಿಯ ಕೆಲವೇ ನಿಮಿಷಗಳಲ್ಲಿ ಕುಸಿದಿದೆ.
ಇಂದು ಬೆಳಗ್ಗೆಯೂ ರಕ್ಷಣಾ ಕಾರ್ಯಾಚರಣೆ ಚುರುಕಾಗಿತ್ತು. ರಕ್ಷಣಾ ಕಾರ್ಯಾಚರಣೆಗೆ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಗೊಂಡವರನ್ನು ನಿನೆವೆ ಪ್ರಾಂತ್ಯದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಎಷ್ಟು ಮಂದಿ ಗಾಯಗೊಂಡಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಮತ್ತು ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಇರಾಕ್ ಪ್ರಧಾನಿ ಕಚೇರಿ ಪ್ರತಿಕ್ರಿಯಿಸಿದೆ.